ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಥಿರ ವಹಿವಾಟು ಮುಂದುವರಿಕೆ

Last Updated 25 ಮೇ 2022, 13:50 IST
ಅಕ್ಷರ ಗಾತ್ರ

ಮುಂಬೈ: ಐ.ಟಿ. ಮತ್ತು ಲೋಹ ವಲಯದ ಷೇರುಗಳಲ್ಲಿ ಮಾರಾಟದ ಒತ್ತಡ ಕಂಡುಬಂದಿದ್ದರಿಂದ ದೇಶದ ಷೇರುಪೇಟೆಗಳು ಆರಂಭದಲ್ಲಿ ಕಂಡುಕೊಂಡಿದ್ದ ಏರಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸತತ ಮೂರನೇ ದಿನವೂ ನಕಾರಾತ್ಮಕವಾಗಿ ವಹಿವಾಟು ಅಂತ್ಯವಾಯಿತು.

ವಿದೇಶಿ ಬಂಡವಾಳ ಹೊರಹರಿವು ಮತ್ತು ಕಚ್ಚಾ ತೈಲ ದರ ಏರಿಕೆಯು ಷೇರುಪೇಟೆಯಲ್ಲಿ ಒತ್ತಡ ಇನ್ನಷ್ಟು ಹೆಚ್ಚಾಗುವಂತೆ ಮಾಡಿದವು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 303 ಅಂಶ ಇಳಿಕೆ ಕಂಡು 53,749 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 99 ಅಂಶ ಇಳಿಕೆಯಾಗಿ 16,025 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು.

ಅಮೆರಿಕದ ಫೆಡರಲ್‌ ರಿಸರ್ವ್‌ನ ಸಭೆಯ ನಿರ್ಧಾರದ ಬಗ್ಗೆ ಜಾಗತಿಕ ಮಾರುಕಟ್ಟೆಗಳು ಗಮನ ಹರಿಸಿವೆ. ಹೀಗಾಗಿ ಜಾಗತಿಕ ಮಾರುಕಟ್ಟೆಗಳಲ್ಲಿ ಮಿಶ್ರ ವಹಿವಾಟು ನಡೆಯಿತು. ಹೂಡಿಕೆದಾರರು ರಕ್ಷಣಾತ್ಮಕವಾಗಿ ವಹಿವಾಟು ನಡೆಸುತ್ತಿದ್ದಾರೆ. ಉತ್ತಮ ಕಂಪನಿಗಳು ಮತ್ತು ವಲಯಗಳಲ್ಲಿ ಮಾತ್ರವೇ ಹೂಡಿಕೆ ಮಾಡುತ್ತಿದ್ದಾರೆ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಸ್ಮಾಲ್‌ಕ್ಯಾಪ್‌ ಸೂಚ್ಯಂಕ ಶೇ 2.94ರಷ್ಟು ಮತ್ತು ಮಿಡ್‌ಕ್ಯಾಪ್‌ ಸೂಚ್ಯಂಕ ಶೇ 1.93ರಷ್ಟು ಇಳಿಕೆ ಕಂಡವು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 1.37ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 115.1 ಡಾಲರ್‌ಗಳಿಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT