ಬೆಂಗಳೂರು: ಆಟೊ ಎಲ್ಪಿಜಿ ಪೂರೈಕೆಯನ್ನು ರಾಜ್ಯದಲ್ಲಿ ಹೆಚ್ಚಿಸಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ.

ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಘರ್ಷದಿಂದ ಎಲ್ಪಿಜಿಗೆ ಬೇಡಿಕೆ ಹೆಚ್ಚಳವಾಗಿದೆ. ಹೀಗಾಗಿ, ತನ್ನ ಕೇಂದ್ರಗಳ ಮೂಲಕ ವಿತರಣೆಯನ್ನು ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನಗಳ ಮಾರಾಟ ಕಂಪನಿಗಳು 72 ಆಟೊ ಎಲ್ಪಿಜಿ ವಿತರಣಾ ಕೇಂದ್ರಗಳನ್ನು (ಎಎಲ್ಡಿಎಸ್) ಹೊಂದಿವೆ. ಈ ಪೈಕಿ ಐಒಸಿ ಕಂಪನಿಯು 55 ಮಳಿಗೆಗಳನ್ನು ಹೊಂದಿದೆ. ಖಾಸಗಿ ಮಾರಾಟಗಾರರು 300ಕ್ಕೂ ಅಧಿಕ ಮಳಿಗೆಗಳನ್ನು ಹೊಂದಿದ್ದಾರೆ. ಇದರಲ್ಲಿ ಶೇ 80ರಷ್ಟು ಮಳಿಗೆಗಳು ಸಂಘರ್ಷದ ಕಾರಣದಿಂದಾಗಿ ಕಾರ್ಯನಿರ್ವಹಿಸುತ್ತಿಲ್ಲ.

ಐಒಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳ ರಿಟೇಲ್ ಮಳಿಗೆಗಳಲ್ಲಿ ಆಟೊ ಎಲ್ಪಿಜಿ ದರ ಬೆಂಗಳೂರಿನಲ್ಲಿ ಲೀಟರ್ಗೆ ₹89.52 ಇದೆ. ಆದರೆ ಖಾಸಗಿ ಮಾರಾಟಗಾರರು ಲೀಟರ್ಗೆ ₹99ರಿಂದ ₹105 ನಡುವೆ ಮಾರಾಟ ಮಾಡುತ್ತಿದ್ದಾರೆ. ಈ ವ್ಯತ್ಯಾಸದಿಂದ ಗ್ರಾಹಕರು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳತ್ತ ಮುಖ ಮಾಡಿದ್ದಾರೆ. ಇದರ ಪರಿಣಾಮವಾಗಿ ಈ ಮಳಿಗೆಗಳಲ್ಲಿ ಗ್ರಾಹಕರಿಂದ ಖರೀದಿ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-1439051370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.