ಬೆಂಗಳೂರು: ಸರ್ಕಾರವು ಕಾರ್ಮಿಕರ ವೇತನ ಹೆಚ್ಚಳ ಮಾಡಿರುವುದರಿಂದ ಗ್ರಾಹಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬಿರಿಯಾನಿ ದರ ₹500ಕ್ಕೆ ತಲುಪಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ (ಕೆಎಸ್ಎಚ್ಎ) ಎಚ್ಚರಿಸಿದೆ.

ಪ್ರಸ್ತುತ ಇರುವ ವೇತನಕ್ಕೆ ಹೋಲಿಸಿದರೆ, ಕನಿಷ್ಠ ವೇತನದಲ್ಲಿ ಸರಾಸರಿ ಶೇ 60ರಷ್ಟು ಏರಿಕೆ ಮಾಡಲಾಗಿದೆ. ಇದು ಹೋಟೆಲ್, ಉಪಾಹಾರ ಗೃಹಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಒಂದು ಪ್ಲೇಟ್ ಇಡ್ಲಿ ಬೆಲೆ ಪ್ರಸ್ತುತ ₹50 ಇರುವುದು ₹90ಕ್ಕೆ ಏರಬಹುದು. ₹80-90 ಇರುವ ಮಸಾಲೆ ದೋಸೆ ದರ ₹150ಕ್ಕೆ ತಲುಪಬಹುದು. ಸಸ್ಯಾಹಾರಿ ಊಟದ ದರ ₹250ಕ್ಕೆ ಏರಬಹುದು ಎಂದು ಸಂಘದ ಅಧ್ಯಕ್ಷ ಜಿ.ಕೆ. ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರವು ತಾಲ್ಲೂಕು ಮಟ್ಟದಲ್ಲಿ ಕೌಶಲರಹಿತ ಕಾರ್ಮಿಕರಿಗೆ ₹19,300, ಜಿಬಿಎ ವ್ಯಾಪ್ತಿಯಲ್ಲಿ ₹23,376ರಿಂದ ಹಿಡಿದು ಕೌಶಲ ಹೊಂದಿದ ಕಾರ್ಮಿಕರಿಗೆ ₹31,100ರವರೆಗೆ ಕನಿಷ್ಠ ವೇತನ ಪರಿಷ್ಕರಿಸಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ₹1,884 ರಿಂದ ₹3,152ಕ್ಕೆ ಏರಿಕೆಯಾಗಿದೆ. ಎಲ್ಲ ದಿನಸಿ ವಸ್ತುಗಳು, ವಿದ್ಯುತ್ ದರ ಹಾಗೂ ಕಸದ ಸೆಸ್ ಏರಿಕೆಯಾಗಿದ್ದು, ಸಣ್ಣ ಹೋಟೆಲ್ ಮಾಲೀಕರ ಮೇಲಿನ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಕನಿಷ್ಠ ವೇತನ ಪರಿಷ್ಕರಣೆ ಜಾರಿಗೊಳಿಸುವ ಸಂದರ್ಭದಲ್ಲಿ ಆತಿಥ್ಯ ಕ್ಷೇತ್ರವನ್ನು ಪ್ರತ್ಯೇಕ ವರ್ಗವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಸಂಘ ಮನವಿ ಮಾಡಿತ್ತು. ಆದರೆ, ಆ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದಂತೆ ಕನಿಷ್ಠ ವೇತನದ ಬಗ್ಗೆ ಮರುಪರಿಶೀಲನೆ ನಡೆಸಬೇಕು. ಸಣ್ಣ ಹೋಟೆಲ್ಗಳ ಮಾಲೀಕರು ಹಾಗೂ ಗ್ರಾಹಕರಿಗೆ ಆಗಬಹುದಾದ ಸಂಕಷ್ಟವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-4-1307371574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.