ಏರ್‌ಟೆಲ್ ಲಾಭ ₹ 1,134 ಕೋಟಿ

ನವದೆಹಲಿ: ಭಾರ್ತಿ ಏರ್‌ಟೆಲ್ ಕಂಪನಿಯು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 1,134 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಅವಧಿಯಲ್ಲಿ ಕಂಪನಿಯ ವರಮಾನ ₹ 28,326 ಕೋಟಿ ಆಗಿದೆ. ವರ್ಷದಿಂದ ವರ್ಷಕ್ಕೆ ಆದಾಯವು ಶೇ 18.8ರಷ್ಟು ಏರಿಕೆ ಕಂಡಿದೆ ಎಂದು ಕಂಪನಿಯು ತಿಳಿಸಿದೆ.
4ಜಿ ಗ್ರಾಹಕರ ಬೆಳವಣಿಗೆ ಮತ್ತು ಪ್ರತಿ ಗ್ರಾಹಕನಿಂದ ಕಂಪನಿಗೆ ದೊರೆಯುವ ಆದಾಯದಲ್ಲಿ (ಎಆರ್‌ಪಿಯು) ಹೆಚ್ಚಳದೊಂದಿಗೆ ಉತ್ತಮ ವ್ಯಾಪಾರ ಕಂಡುಕೊಳ್ಳುತ್ತಿರುವುದಾಗಿ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.