ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ದಿನ 10 ಲಕ್ಷ ಬ್ಯಾರಲ್‌ ತೈಲ ಮಾರುಕಟ್ಟೆಗೆ: ಅಮೆರಿಕ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಿಸುವ ಉದ್ದೇಶ
Last Updated 1 ಏಪ್ರಿಲ್ 2022, 11:25 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಅಮೆರಿಕವು ತನ್ನ ಸಂಗ್ರಹಾಗಾರದಿಂದ ಮುಂದಿನ ಆರು ತಿಂಗಳುಗಳವರೆಗೆ ಪ್ರತಿ ದಿನವೂ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲವನ್ನು ಬಿಡುಗಡೆ ಮಾಡಲಿದೆ.

ರಷ್ಯಾ ದೇಶವು ಉಕ್ರೇನ್‌ ಮೇಲೆ ಯುದ್ಧ ಆರಂಭ ಮಾಡಿದ ಬಳಿಕ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡು, ಅನಿಲ ದರಗಳು ಸಹ ಹೆಚ್ಚಾದವು. ಆ ಬಳಿಕ ಅಮೆರಿಕವು ತುರ್ತು ಬಳಕೆಗೆ ಸಂಗ್ರಹಿಸಿ ಇಟ್ಟುಕೊಂಡಿರುವ ತೈಲವನ್ನು ಮಾರುಕಟ್ಟೆಗೆ ಬಿಡುವ ನಿರ್ಧಾರ ತೆಗೆದುಕೊಂಡಿತು.

ಮುಂದಿನ ಆರು ತಿಂಗಳುಗಳವರೆಗೆ ಪ್ರತಿ ದಿನವೂ 10 ಲಕ್ಷ ಬ್ಯಾರಲ್‌ಗಳಷ್ಟು ಕಚ್ಚಾ ತೈಲವನ್ನು ಸಂಗ್ರಹಾಗಾರದಿಂದ ಬಿಡುಗಡೆ ಮಾಡಲು ಒಪ್ಪಿಗೆ ನೀಡುತ್ತಿದ್ದೇನೆ’ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಗುರುವಾರ ಹೇಳಿದ್ದಾರೆ.

ಸಂಗ್ರಹಾಗಾರದಿಂದ ಈ ಪ್ರಮಾಣದಲ್ಲಿ ತೈಲ ಬಿಡುಗಡೆ ಮಾಡುತ್ತಿರುವುದು ಅಮೆರಿಕದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಯಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಸಂಗ್ರಹಾಗಾರಗಳಲ್ಲಿ 56.8 ಕೋಟಿ ಬ್ಯಾರಲ್‌ಗಳಷ್ಟು ತೈಲ ಸಂಗ್ರಹ ಇದೆ ಎಂದು ಅಮೆರಿಕದ ರಾಷ್ಟ್ರೀಯ ಆರ್ಥಿಕ ಸಮಿತಿ ನಿರ್ದೇಶಕ ಬ್ರಿಯಾನ್‌ ಡೀಸ್‌ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸಂಗ್ರಹಾಗಾರದ ತೈಲ ಬಿಡುಗಡೆ ಮಾಡುವ ಕುರಿತು ಭಾರತವನ್ನೂ ಒಳಗೊಂಡು ಹಲವು ದೇಶಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

‘ಕಚ್ಚಾ ತೈಲ ಬೆಲೆ ತಗ್ಗಿಸಲು, ಮಾರುಕಟ್ಟೆಯಲ್ಲಿನ ಅಸ್ಥಿರತೆಯನ್ನು ನಿವಾರಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ಸಿದ್ಧವಿದೆ’ ಎಂದುಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ ತೆಲಿ ಅವರು ಗುರುವಾರವಷ್ಟೇ ಲೋಕಸಭೆಗೆ ತಿಳಿಸಿದ್ದಾರೆ. 2021ರ ನವೆಂಬರ್‌ನಲ್ಲಿ ಭಾರತವು ತನ್ನ ಸಂಗ್ರಹಾಗಾರದಲ್ಲಿನ 50 ಲಕ್ಷ ಬ್ಯಾರೆಲ್ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಒಪ್ಪಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT