ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಖಾಸಗೀಕರಣದಿಂದ ಅಪಾಯ: ಆರ್‌ಬಿಐ ಲೇಖನ

Last Updated 18 ಆಗಸ್ಟ್ 2022, 16:03 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖಾಸಗೀಕರಣಗೊಳಿಸುವುದು ಒಳಿತಿಗಿಂತ ಹೆಚ್ಚು ಕೆಡುಕನ್ನು ಉಂಟುಮಾಡುತ್ತದೆ ಎಂದು ಆರ್‌ಬಿಐ ಬುಲೆಟಿನ್‌ನಲ್ಲಿ ಪ್ರಕಟವಾಗಿರುವ ಲೇಖನವೊಂದು ಹೇಳಿದೆ.

ಲಾಭವನ್ನು ಹೆಚ್ಚಿಸುವಲ್ಲಿ ಖಾಸಗಿ ಬ್ಯಾಂಕ್‌ಗಳು ದಕ್ಷವಾಗಿವೆ. ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಹಣಕಾಸಿನ ಒಳಗೊಳ್ಳುವಿಕೆಯ ವಿಚಾರದಲ್ಲಿ ಒಳ್ಳೆಯ ಕೆಲಸ ಮಾಡಿವೆ ಎಂದು ಲೇಖನದಲ್ಲಿ ವಿವರಿಸಲಾಗಿದೆ. ಲೇಖನದಲ್ಲಿ ವ್ಯಕ್ತವಾಗಿರುವ ಅಭಿಪ್ರಾಯವು ಆರ್‌ಬಿಐ ಅಭಿಪ್ರಾಯ ಅಲ್ಲ.

‘ಖಾಸಗೀಕರಣವು ಹೊಸ ಪರಿಕಲ್ಪನೆಯೇನೂ ಅಲ್ಲ. ಇದರ ಒಳಿತು, ಕೆಡುಕುಗಳು ಚೆನ್ನಾಗಿ ತಿಳಿದಿವೆ. ಎಲ್ಲ ಸಮಸ್ಯೆಗಳಿಗೂ ಖಾಸಗೀಕರಣವೇ ಮದ್ದು ಎಂಬ ಸಾಂಪ್ರದಾಯಿಕ ಆಲೋಚನೆ ಹಿಂದೆ ಇತ್ತು. ಆದರೆ, ಖಾಸಗೀಕರಣವನ್ನು ಹೆಚ್ಚು ಸೂಕ್ಷ್ಮವಾಗಿ ಜಾರಿಗೆ ತರಬೇಕು ಎಂಬಲ್ಲಿವೆ ಆರ್ಥಿಕ ಆಲೋಚನೆಗಳು ಬಂದಿವೆ’ ಎಂದು ಲೇಖನವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT