ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾಂತ್ಯಕ್ಕೆ ಜಲನ್ ಸಮಿತಿ ವರದಿ ಸಲ್ಲಿಕೆ

Last Updated 12 ಜೂನ್ 2019, 17:13 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಬಂಡವಾಳ ಮೀಸಲು ಪ್ರಮಾಣ ನಿಗದಿಪಡಿಸಲು ರಚಿಸಲಾಗಿರುವ ಬಿಮಲ್‌ ಜಲನ್‌ ಸಮಿತಿಯು ಈ ತಿಂಗಳಾಂತ್ಯಕ್ಕೆ ವರದಿ ಸಲ್ಲಿಸಲಿದೆ.

ವರದಿ ಅಂತಿಮಗೊಳಿಸುವ ಮೊದಲು ಸಮಿತಿಯು ಮತ್ತೊಮ್ಮೆ ಸಭೆ ಸೇರಲಿದೆ. ಸದಸ್ಯರಲ್ಲಿ ಭಿನ್ನಾಭಿಪ್ರಾಯ ತಲೆದೋರಿರಬಹುದು. ಚರ್ಚೆ ಮೂಲಕ ಬಗೆಹರಿಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

6 ಮಂದಿ ಸದಸ್ಯರ ಈ ಸಮಿತಿಯನ್ನು ಆರ್‌ಬಿಐನ ಮಾಜಿ ಗವರ್ನರ್‌ ಬಿಮಲ್‌ ಜಲನ್‌ ನೇತೃತ್ವದಲ್ಲಿ 2018ರ ಡಿಸೆಂಬರ್‌ನಲ್ಲಿ ರಚಿಸಲಾಗಿದೆ.

ಆರ್‌ಬಿಐ ತನ್ನ ಬಂಡವಾಳ ಮೀಸಲು ಪ್ರಮಾಣವನ್ನು ಜಾಗತಿಕವಾಗಿ ಬಳಕೆಯಲ್ಲಿ ಇರುವ ನಿಯಮಗಳ ಅನ್ವಯ ನಿಗದಿಪಡಿಸಬೇಕು. ಹೆಚ್ಚುವರಿ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಬೇಕು ಎನ್ನುವುದು ಹಣಕಾಸು ಸಚಿವಾಲಯದ ನಿಲುವಾಗಿದೆ. ಆರ್‌ಬಿಐ ಬಳಿ ₹ 9.6 ಲಕ್ಷ ಕೋಟಿ ಹೆಚ್ಚುವರಿ ಬಂಡವಾಳ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT