ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯೋಕಾನ್ ಲಾಭ ಶೇಕಡ 18ರಷ್ಟು ಇಳಿಕೆ

Last Updated 22 ಅಕ್ಟೋಬರ್ 2021, 10:38 IST
ಅಕ್ಷರ ಗಾತ್ರ

ನವದೆಹಲಿ: ಜೈವಿಕ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಬಯೋಕಾನ್‌ನ ಸೆಪ್ಟೆಂಬರ್‌ ತ್ರೈಮಾಸಿಕದ ನಿವ್ವಳ ಲಾಭದ ಪ್ರಮಾಣದಲ್ಲಿ ಶೇಕಡ 18ರಷ್ಟು ಇಳಿಕೆ ಆಗಿದೆ. ಕಂಪನಿಯು ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಒಟ್ಟು ₹ 138 ಕೋಟಿ ನಿವ್ವಳ ಲಾಭ ಗಳಿಸಿದೆ.

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿಯು ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ₹ 169 ಕೋಟಿ ನಿವ್ವಳ ಲಾಭ ಗಳಿಸಿತ್ತು. ಈ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ಶೇಕಡ 5ರಷ್ಟು ಹೆಚ್ಚಳ ಆಗಿದ್ದು, ₹ 1,840ಕ್ಕೆ ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ಆದಾಯವು ₹ 1,750 ಕೋಟಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT