ಸೋಮವಾರ, ಜೂಲೈ 6, 2020
27 °C

ಬಯೊಕಾನ್‌ಗೆ ₹206 ಕೋಟಿ ಲಾಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜೈವಿಕ ತಂತ್ರಜ್ಞಾನದ ಪ್ರಮುಖ ಸಂಸ್ಥೆಯಾಗಿರುವ ಬಯೊಕಾನ್‌, ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 206 ಕೋಟಿ ನಿವ್ವಳ ಲಾಭ ಗಳಿಸಿ, ಶೇ 72ರಷ್ಟು ಏರಿಕೆ ದಾಖಲಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಸಂಸ್ಥೆಯು ₹ 119 ಕೋಟಿ ನಿವ್ವಳ ಲಾಭ ಗಳಿಸಿತ್ತು ಎಂದು ಸಂಸ್ಥೆಯು ಮುಂಬೈ ಷೇರುಪೇಟೆಗೆ ಮಾಹಿತಿ ನೀಡಿದೆ.

ಜೂನ್‌ ತ್ರೈಮಾಸಿಕ ಅವಧಿಯಲ್ಲಿನ ಕಂಪನಿಯ ಒಟ್ಟಾರೆ ವರಮಾನವು ₹ 1,490 ಕೋಟಿಗಳಷ್ಟಿದೆ. ವರ್ಷದ ಹಿಂದಿನ ಇದೇ ಅವಧಿಯಲ್ಲಿನ ವರಮಾನವು ₹ 1,192 ಕೋಟಿಗಳಷ್ಟಿತ್ತು.

‘ಜೈವಿಕ  ಔಷಧ ಮತ್ತು ಸೂಕ್ಷ್ಮಾಣುಗಳ ವಹಿವಾಟಿನಲ್ಲಿನ ಗಮನಾರ್ಹ ಸಾಧನೆಯಿಂದಾಗಿ ವಹಿವಾಟು ಗಮನಾರ್ಹವಾಗಿ ಏರಿಕೆ ದಾಖಲಿಸಿದೆ’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಿರಣ್‌ ಮಜುಂದಾರ್‌ ಹೇಳಿದ್ದಾರೆ.

‘ಜೈವಿಕ ಔಷಧಗಳ ತಯಾರಿಕೆಯಲ್ಲಿನ ದೀರ್ಘಾವಧಿ ಹೂಡಿಕೆಯು ನಿರೀಕ್ಷಿತ ಫಲಿತಾಂಶ ನೀಡುತ್ತಿದೆ. ಇದೇ ಕಾರಣಕ್ಕೆ ವರಮಾನವು
ಶೇ 25ರಷ್ಟು ಹೆಚ್ಚಳಗೊಂಡಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು