ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನಾಭರಣಕ್ಕೆ ಹಾಲ್‌ಮಾರ್ಕ್‌: 2021ರಿಂದ ಕಡ್ಡಾಯ

Last Updated 29 ನವೆಂಬರ್ 2019, 20:25 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ಮಾರಾಟವಾಗುವ ಚಿನ್ನಾಭರಣಗಳಿಗೆ 2021ರ ಜನವರಿ 15ರಿಂದ ಹಾಲ್‌ಮಾರ್ಕ್‌ ಕಡ್ಡಾಯವಾಗಲಿದೆ’ ಎಂದು ಗ್ರಾಹಕ ವ್ಯವಹಾರಗಳ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ತಿಳಿಸಿದ್ದಾರೆ.

‘2020ರ ಜನವರಿ 15ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು. ಒಂದು ವರ್ಷದ ಬಳಿಕ ಜಾರಿಗೆ ಬರಲಿದೆ.

‘ಎಲ್ಲಾ ಚಿನ್ನಾಭರಣ ವರ್ತಕರುಭಾರತೀಯ ಮಾನದಂಡ ಮಂಡಳಿಯಲ್ಲಿ (ಬಿಐಎಸ್‌) ನೋಂದಾಯಿಸಿಕೊಳ್ಳಬೇಕು. ಹಾಲ್‌ಮಾರ್ಕ್‌ ಇರುವ ಚಿನ್ನಾಭರಣಗಳನ್ನು ಮಾತ್ರವೇ ಮಾರಾಟ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

2000ದಿಂದಲೂ ಹಾಲ್‌ಮಾರ್ಕ್‌ ಬಳಕೆ ಆರಂಭವಾಗಿದೆ. ಸದ್ಯ ಬಳಕೆಯಲ್ಲಿರುವ ಚಿನ್ನಾಭರಣಗಳಲ್ಲಿ ಶೇ 40ರಷ್ಟು ಹಾಲ್‌ಮಾರ್ಕ್‌ ಒಳಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT