ಭಾನುವಾರ, ಸೆಪ್ಟೆಂಬರ್ 26, 2021
21 °C

ಕಪ್ಪುಹಣ ಘೋಷಣೆಗೆ ಯೋಜನೆ ಸಾಧ್ಯತೆ

ಅನ್ನಪೂರ್ಣಾ ಸಿಂಗ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಈ ಬಾರಿ ನೇರ ತೆರಿಗೆ ಸಂಗ್ರಹವು ಅಂದಾಜಿಗಿಂತಲೂ ಕಡಿಮೆ ಆಗಲಿದೆ. ಹೀಗಾಗಿ ಕೇಂದ್ರ ಸರ್ಕಾರವು ತೆರಿಗೆ ತಪ್ಪಿಸುವವರಿಗೆ ‘ಆದಾಯ ಘೋಷಣೆ ಯೋಜನೆ’ಯನ್ನು (ಐಡಿಎಸ್‌) ಜಾರಿಗೊಳಿಸುವ ಸಾಧ್ಯತೆ ಇದೆ.

ತೆರಿಗೆ ಮತ್ತು ದಂಡ ಪಾವತಿಸುವ ಮೂಲಕ ಕಪ್ಪುಹಣ ಮತ್ತು ಅಕ್ರಮ ಆಸ್ತಿ ಘೋಷಣೆ ಮಾಡಿಕೊಳ್ಳಲು ಈ ಯೋಜನೆಯಲ್ಲಿ ಅವಕಾಶ ಲಭ್ಯವಾಗಲಿದೆ. 

2016ರಲ್ಲಿ ಈ ಯೋಜನೆಯ ಮೂಲಕ ₹ 65 ಸಾವಿರ ಕೋಟಿ ಕಪ್ಪುಹಣ ಘೋಷಣೆಯಾಗಿತ್ತು. ಈ ಬಾರಿ ₹ 50 ಸಾವಿರ ಕೋಟಿ ಸಂಗ್ರಹವಾಗುವ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಇಟ್ಟುಕೊಂಡಿದೆ.

ಕಳೆದ ಬಾರಿ ಶೇ 45ರಷ್ಟು ತೆರಿಗೆ ಮತ್ತು ದಂಡ ಕಟ್ಟಿ ಅಕ್ರಮ ಆಸ್ತಿ ಮತ್ತು ಕಪ್ಪುಹಣವನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು.

ಹಲವು ವರ್ಷಗಳಿಂದ ‌ಬಹಳಷ್ಟು ಸಿರಿವಂತರು ತಮ್ಮ ನೈಜ ಆದಾಯ ಮತ್ತು ಆಸ್ತಿಗಳ ಮಾಹಿತಿಯನ್ನು ಘೋಷಿಸಿಕೊಂಡಿಲ್ಲ’ ಎಂದು ಅಧಿಕಾರಿ ಮೂಲಗಳು ಪ್ರಜಾವಾಣಿಗೆ ಮಾಹಿತಿ ನೀಡಿವೆ.

ನೇರ ತೆರಿಗೆ ಮೂಲಕ ₹ 13.35 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದುವರೆಗೆ ₹ 5.2 ಲಕ್ಷ ಕೋಟಿ ಮಾತ್ರವೇ ಸಂಗ್ರಹವಾಗಿದೆ. ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ತೆರಿಗೆ ಸಂಗ್ರಹವು ಶೇ 3ರಷ್ಟು ಅಲ್ಪ ಪ್ರಗತಿ ಕಂಡಿದೆ.

ಜಿಎಸ್‌ಟಿ ಸಂಗ್ರಹದಲ್ಲಿ ಇಳಿಕೆ ಆಗುತ್ತಿರುವುದರಿಂದ ಒಟ್ಟಾರೆ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬೀರುವ ಅಂದಾಜು ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು