ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಶ್ಚಿತ ಠೇವಣಿ ಬಡ್ಡಿದರ ಹೆಚ್ಚಳ

Published 29 ಡಿಸೆಂಬರ್ 2023, 16:22 IST
Last Updated 29 ಡಿಸೆಂಬರ್ 2023, 16:22 IST
ಅಕ್ಷರ ಗಾತ್ರ

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಬರೋಡಾ ಕೂಡ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ.‌‌

ಶುಕ್ರವಾರದಿಂದ ಈ ಬಡ್ಡಿದರ ಜಾರಿಗೆ ಬಂದಿದೆ ಎಂದು ಬ್ಯಾಂಕ್‌ ತಿಳಿಸಿದೆ. 

7ರಿಂದ 14 ದಿನಗಳವರೆಗಿನ ಬಡ್ಡಿದರವನ್ನು ಶೇ 3ರಿಂದ ಶೇ 4.25ಕ್ಕೆ ಹೆಚ್ಚಿಸಲಾಗಿದೆ. 15ರಿಂದ 45 ದಿನಗಳವರೆಗಿನ ಬಡ್ಡಿದರವನ್ನು ಶೇ 4.50ಕ್ಕೆ ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT