ನವದೆಹಲಿ: ಅಮೆರಿಕದ ವಿಮಾನ ತಯಾರಿಕಾ ಕಂಪನಿ ಬೋಯಿಂಗ್, ಬೆಂಗಳೂರಿನಲ್ಲಿರುವ ತನ್ನ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸೆಂಟರ್ನ 180 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ ಒಟ್ಟು 7 ಸಾವಿರ ಉದ್ಯೋಗಿಗಳಿದ್ದಾರೆ. ಕಂಪನಿಯು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಇದನ್ನು ನಿಭಾಯಿಸಲು ಜಾಗತಿಕ ಮಟ್ಟದಲ್ಲಿರುವ ಒಟ್ಟು ಉದ್ಯೋಗಿಗಳ ಪೈಕಿ ಶೇ 10ರಷ್ಟು ಮಂದಿಯನ್ನು ಕೆಲಸದಿಂದ ಕಡಿತಗೊಳಿಸುವ ಬಗ್ಗೆ ಕಳೆದ ವರ್ಷವೇ ಕಂಪನಿಯು ಪ್ರಕಟಿಸಿತ್ತು ಎಂದು ಹೇಳಿವೆ.

ಡಿಸೆಂಬರ್ ತ್ರೈಮಾಸಿಕದಲ್ಲಿಯೇ ಈ ಉದ್ಯೋಗಿಗಳನ್ನು ವಜಾಗೊಳಿಸಿದೆ. ಗ್ರಾಹಕರ ಸೇವೆ, ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾವಹಿಸಿ ಈ ಕ್ರಮಕೈಗೊಂಡಿದೆ ಎಂದು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.