ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಆಫ್‌ ಮಹಾರಾಷ್ಟ್ರಕ್ಕೆ ₹1,218 ಕೋಟಿ ಲಾಭ

Published 27 ಏಪ್ರಿಲ್ 2024, 14:39 IST
Last Updated 27 ಏಪ್ರಿಲ್ 2024, 14:39 IST
ಅಕ್ಷರ ಗಾತ್ರ

ಮುಂಬೈ: 2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ (ಬಿಒಎಂ) ನಿವ್ವಳ ಲಾಭದಲ್ಲಿ ಶೇ 45ರಷ್ಟು ಏರಿಕೆಯಾಗಿದ್ದು, ಒಟ್ಟು ₹1,218 ಕೋಟಿ ಗಳಿಸಿದೆ.

ವಸೂಲಾಗದ ಸಾಲದ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಹಾಗೂ ಬಡ್ಡಿ ವರಮಾನದಲ್ಲಿ ಹೆಚ್ಚಳ ಆಗಿರುವುದರಿಂದ ಲಾಭದಲ್ಲಿ ಹೆಚ್ಚಳವಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ. 

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹840 ಕೋಟಿ ಲಾಭ ಗಳಿಸಿತ್ತು. 2023–24ರ ಪೂರ್ಣ ಆರ್ಥಿಕ ವರ್ಷದಲ್ಲಿ ನಿವ್ವಳ ಲಾಭವು ಶೇ 55ರಷ್ಟು ಏರಿಕೆಯಾಗಿದ್ದು, ಒಟ್ಟು ₹4,055 ಕೋಟಿ ಗಳಿಸಿದೆ.

ಮಾರ್ಚ್‌ ತ್ರೈಮಾಸಿಕದಲ್ಲಿ ಬಡ್ಡಿ ವರಮಾನವು ಶೇ 18.17ರಷ್ಟು ಏರಿಕೆಯಾಗಿದ್ದು, ₹2,548 ಕೋಟಿ ಗಳಿಸಿದೆ. ಪೂರ್ಣ ಆರ್ಥಿಕ ವರ್ಷದಲ್ಲಿ ₹5,467 ಕೋಟಿ ಬಡ್ಡಿ ವರಮಾನ ಗಳಿಸಿದೆ. ಬಡ್ಡಿಯೇತರ ವರಮಾನವು ಶೇ 24ರಷ್ಟು ಹೆಚ್ಚಳವಾಗಿದ್ದು, ₹1,022 ಕೋಟಿ ಆಗಿದೆ. 

ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 2.47ರಿಂದ ಶೇ 1.88ಕ್ಕೆ ಇಳಿಕೆಯಾಗಿದೆ. ನಿವ್ವಳ ಎನ್‌ಪಿಸಿ ಶೇ 0.25ರಿಂದ ಶೇ 0.20ಕ್ಕೆ ಕುಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT