ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ICICI ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್

ಸಿಬಿಐಗೆ ಮುಖಭಂಗ
Published 7 ಫೆಬ್ರುವರಿ 2024, 6:45 IST
Last Updated 7 ಫೆಬ್ರುವರಿ 2024, 6:45 IST
ಅಕ್ಷರ ಗಾತ್ರ

ಮುಂಬೈ: ಐಸಿಐಸಿಐ ಬ್ಯಾಂಕ್‌ನ ಮಾಜಿ ಎಂಡಿ ಹಾಗೂ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಸಹವರ್ತಿಗಳ ಬಂಧನ ಅಕ್ರಮ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಸಾಲದ ಹಗರಣದಲ್ಲಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಡಿಸೆಂಬರ್ 2022ರಲ್ಲಿ ಬಂಧಿಸಿತ್ತು. ಬಳಿಕ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. 2023 ಏಪ್ರಿಲ್‌ನಲ್ಲಿ ಇದೇ ಬಾಂಬೆ ಹೈಕೋರ್ಟ್ ಆರೋಪಿಗಳಿಗೆ ಮಧ್ಯಂತ ಜಾಮೀನು ಮಂಜೂರು ಮಾಡಿತ್ತು.

ಮಂಗಳವಾರ ಆರೋಪಿಗಳ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿಗಳಾದ ಅಂಜು ಪ್ರಭುದೇಸಾಯಿ ಹಾಗೂ ಎನ್. ಆರ್. ಬೋರ್‌ಕರ್ ಅವರನ್ನೊಳಗೊಂಡ ಪೀಠ, ಮಧ್ಯಂತರ ಜಾಮೀನು ಆದೇಶವನ್ನು ದೃಢಪಡಿಸಿತು. ಅಲ್ಲದೇ ಕೊಚ್ಚರ್ ದಂಪತಿಗಳ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ, ‘ಬಂಧನ ಅಕ್ರಮವಾಗಿತ್ತು. ಈ ವೇಳೆ ಸಿಬಿಐ ಸರಿಯಾದ ಕ್ರಮಗಳನ್ನು ಪಾಲಿಸಿರಲಿಲ್ಲ‘ ಎಂದು ಹೇಳಿತು.

ನಿರ್ದೇಶಕಿ ಚಂದಾ ಕೊಚ್ಚರ್‌, ದೀಪಕ್‌ ಕೊಚ್ಚರ್‌ ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪವಿದೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೊಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

ವಿಡಿಯೊಕಾನ್ ಗ್ರೂಪ್, ಐಸಿಐಸಿಐ ಬ್ಯಾಂಕ್‌ನಿಂದ ₹ 3,250 ಕೋಟಿ ಸಾಲ ಪಡೆದ ಕೆಲ ತಿಂಗಳ ನಂತರ ವಿಡಿಯೊಕಾನ್ ಪ್ರವರ್ತಕ ವೇಣುಗೋಪಾಲ್, ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದರು.

ಆರೋಪಿಯು(ಚಂದಾ ಕೊಚ್ಚರ್) ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗೆ ಸಾಲವನ್ನು ಮಂಜೂರು ಮಾಡಿದ್ದಾರೆ ಎಂಬುದು ಸಿಬಿಐ ಆರೋಪವಾಗಿದೆ.
ಪ್ರಕರಣ ಕುರಿತಂತೆ 2019ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT