ಮಂಗಳವಾರ, ಸೆಪ್ಟೆಂಬರ್ 21, 2021
29 °C

ನಬಾರ್ಡ್, ಸಿಡ್ಬಿ ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani Photo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಬಾರ್ಡ್‌ ಮತ್ತು ಸಿಡ್ಬಿ (ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ನಿರ್ವಹಿಸುತ್ತಿರುವ ‘ಒಂದು ಜಿಲ್ಲೆ, ಒಂದು ಉತ್ಪನ್ನ’ದಂತಹ ಯೋಜನೆಗಳನ್ನು ರಾಜ್ಯದಲ್ಲಿ ವ್ಯಾಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಮನವಿ ಮಾಡಿದರು.

‘ಈ ವಿಚಾರವಾಗಿ ನಬಾರ್ಡ್‌ ಹಾಗೂ ಸಿಡ್ಬಿ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು, ಯೋಜನೆಗಳನ್ನು ರಾಜ್ಯದಲ್ಲಿ ಪೂರ್ತಿಯಾಗಿ ಅನುಷ್ಠಾನಕ್ಕೆ ತಂದ ಬಳಿಕ ರಾಜ್ಯಕ್ಕೆ ತಾವು ಭೇಟಿ ನೀಡುವುದಾಗಿ ನಿರ್ಮಲಾ ಅವರು ನನಗೆ ಭರವಸೆ ನೀಡಿದ್ದಾರೆ’ ಎಂದು ಬೊಮ್ಮಾಯಿ ಅವರು ಸಭೆಯ ನಂತರ ತಿಳಿಸಿದರು.

ಕೌಶಲ ಅಭಿವೃದ್ಧಿಯಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಿಗೆ ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಉದ್ಯೋಗಾವಕಾಶ ಸೃಷ್ಟಿಯಲ್ಲಿ ಈ ಯೋಜನೆಗಳು ಮಹತ್ವದ್ದಾಗುತ್ತವೆ ಎಂದು ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿನ ಜಿಎಸ್‌ಟಿ ಸಂಗ್ರಹ ಹಾಗೂ ರಾಜ್ಯಕ್ಕೆ ಬರಬೇಕಿರುವ ಪರಿಹಾರ ಮೊತ್ತದ ಬಗ್ಗೆಯೂ ಬೊಮ್ಮಾಯಿ ಅವರು ನಿರ್ಮಲಾ ಅವರ ಜೊತೆ ಚರ್ಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು