ನವದೆಹಲಿ: ಬಾಷ್ ಸಮೂಹದ ಭಾರತದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಗುರುಪ್ರಸಾದ್ ಮುದ್ಲಾಪುರ ಅವರನ್ನು ನೇಮಕ ಮಾಡಿರುವುದಾಗಿ ಬಾಷ್ ಲಿಮಿಟೆಡ್ ತಿಳಿಸಿದೆ.
ಹಾಲಿ ಅಧ್ಯಕ್ಷ ಸೌಮಿತ್ರ ಭಟ್ಟಾಚಾರ್ಯ ಅವರು ಜೂನ್ 30ರಂದು ನಿವೃತ್ತಿ ಆಗಲಿದ್ದು, ಜುಲೈ 1 ರಂದು ಗುರುಪ್ರಸಾದ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಗುರುಪ್ರಸಾದ್ ಅವರು ಸದ್ಯ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಆಗಿದ್ದು, ಆ ಹೊಣೆಗಾರಿಕೆಯನ್ನು ಸಹ ನೋಡಿಕೊಳ್ಳಲಿದ್ದಾರೆ ಎಂದು ಕಂಪನಿ ತಿಳಿಸಿದೆ.
ಬಾಷ್ ಸಮೂಹದಲ್ಲಿ 15 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಅವರು ಹಲವು ವಿಭಾಗಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಬಾಷ್ ಲಿಮಿಟೆಡ್‌ನಲ್ಲಿ ಸದ್ಯ ಕಾರ್ಯನಿರ್ವಾಹಕ ನಿರ್ದೇಶಕ ಆಗಿರುವ ಸಂದೀಪ್ ನೆಲಮಂಗಲ ಅವರನ್ನು ಬಾಷ್ ಲಿಮಿಟೆಡ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಆಗಿ ಜುಲೈ 1ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.