ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಷ್‌ ನಿವ್ವಳ ಲಾಭ ₹ 372 ಕೋಟಿ

Last Updated 9 ನವೆಂಬರ್ 2022, 10:52 IST
ಅಕ್ಷರ ಗಾತ್ರ

ನವದೆಹಲಿ: ವಾಹನಗಳ ಬಿಡಿಭಾಗಗಳನ್ನು ತಯಾರಿಸುವ ಬಾಷ್‌ ಕಂಪನಿಯು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 372 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಲಾಭವು ₹372 ಕೋಟಿ ಇತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕಾರ್ಯಾಚರಣಾ ವರಮಾನ ₹2,918 ಕೋಟಿಯಿಂದ ₹ 3,662 ಕೋಟಿಗೆ ಏರಿಕೆ ಆಗಿದೆ.

ಪೂರೈಕೆ ವ್ಯವಸ್ಥೆಯಲ್ಲಿನ ಸಮಸ್ಯೆಗಳು, ತಯಾರಿಕಾ ವೆಚ್ಚ ಹೆಚ್ಚಳದ ಹೊರತಾಗಿಯೂ ಉತ್ತಮ ಫಲಿತಾಂಶ ಕಂಡುಬಂದಿದೆ ಎಂದು ಬಾಷ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಸೌಮಿತ್ರ ಭಟ್ಟಾಚಾರ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT