ಅಕ್ಟೋಬರ್ ನಂತರ ಎಲ್ಐಸಿ ಐಪಿಒ

ನವದೆಹಲಿ: ದೇಶದ ಅತಿದೊಡ್ಡ ವಿಮಾ ಕಂಪನಿಯಾದ ಭಾರತೀಯ ಜೀವವಿಮಾ ನಿಗಮದ (ಎಲ್ಐಸಿ) ಷೇರುಗಳನ್ನು ಸಾರ್ವಜನಿಕರಿಗೆ ಖರೀದಿಗೆ ಮುಕ್ತವಾಗಿಸುವ ಪ್ರಕ್ರಿಯೆಯು (ಐಪಿಒ) ಅಕ್ಟೋಬರ್ ನಂತರ ಆಗಬಹುದು ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ (ಡಿಐಪಿಎಎಂ) ಇಲಾಖೆಯ ಕಾರ್ಯದರ್ಶಿ ತುಹಿನ್ ಕಾಂತ ಪಾಂಡೆ ಹೇಳಿದ್ದಾರೆ.
ಎಲ್ಐಸಿ ಹಾಗೂ ಐಡಿಬಿಐ ಬ್ಯಾಂಕ್ನ ಷೇರುಗಳ ಮಾರಾಟಕ್ಕೆ ಅಗತ್ಯವಿರುವ ಕಾನೂನು ತಿದ್ದುಪಡಿ ಮಸೂದೆಯನ್ನು ಸರ್ಕಾರವು ಸಂಸತ್ತಿನಲ್ಲಿ ಬಜೆಟ್ ಜೊತೆಯಲ್ಲೇ ಮಂಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.