ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಆಮದು: ಪೆಟ್ರೊಬ್ರಾಸ್‌ ಜತೆ ಬಿಪಿಸಿಎಲ್‌ ಒಪ್ಪಂದ

Last Updated 24 ಸೆಪ್ಟೆಂಬರ್ 2022, 17:38 IST
ಅಕ್ಷರ ಗಾತ್ರ

ನವದೆಹಲಿ: ಲ್ಯಾಟಿನ್‌ ಅಮೆರಿಕದ ದೇಶಗಳಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಸಲುವಾಗಿ ಬ್ರೆಜಿಲ್‌ನ ಪೆಟ್ರೊಬ್ರಾಸ್‌ ಕಂಪನಿಯ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌ (ಬಿಪಿಸಿಎಲ್‌) ಶನಿವಾರ ತಿಳಿಸಿದೆ.

ಕಂಪನಿಯು ಮುಂಬೈ, ಮಧ್ಯಪ್ರದೇಶದ ಬಿನಾ ಮತ್ತು ಕೊಚ್ಚಿಯಲ್ಲಿ ತೈಲ ಸಂಸ್ಕರಣಾ ಘಟಕಗಳನ್ನು ಹೊಂದಿದೆ. ಇರಾಕ್‌, ಸೌದಿ ಅರೇಬಿಯಾ ಒಳಗೊಂಡು ಪಶ್ಚಿಮ ಏಷ್ಯಾದ ದೇಶಗಳಿಂದ ಕಂಪನಿಯು ಹೆಚ್ಚಿನ ಪ್ರಮಾಣದಲ್ಲಿ ತೈಲ ಆಮದು ಮಾಡಿಕೊಳ್ಳುತ್ತಿದೆ.

ಯಾವುದೇ ನಿರ್ದಿಷ್ಟ ಪ್ರದೇಶದ ಮೇಲಿನ ಅವಲಂಬನೆಯನ್ನು ತಗ್ಗಿಸಲು ಕಂಪನಿಯು ಬೇರೆ ಮೂಲಗಳ ಹುಡುಕಾಟ ನಡೆಸುತ್ತಿದೆ. ಇದರ ಭಾಗವಾಗಿ ಬ್ರೆಜಿಲ್‌ನ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಬಿಪಿಸಿಎಲ್‌ ಅಧ್ಯಕ್ಷ ಅರುಣ್‌ ಕುಮಾರ್‌ ಸಿಂಗ್ ಮತ್ತು ಪೆಟ್ರೊಬ್ರಾಸ್‌ ಸಿಇಒ ಕೈಯೊ ಪೇಸ್‌ ಡಿ ಆಂಡ್ರೇಡ್‌ ಅವರು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT