ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಪಿಸಿಎಲ್‌: ಖಾಸಗೀಕರಣದ ನಂತರವೂ ಸಬ್ಸಿಡಿ’

Last Updated 27 ನವೆಂಬರ್ 2020, 21:11 IST
ಅಕ್ಷರ ಗಾತ್ರ

ನವದೆಹಲಿ: ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ (ಬಿಪಿಸಿಎಲ್‌) ಕಂಪನಿಯ ಖಾಸಗೀಕರಣದ ನಂತರವೂ, ಅದರ ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಗೆ ಸಬ್ಸಿಡಿ ಸ್ಥಗಿತವಾಗದು ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

‘ಅಡುಗೆ ಅನಿಲ ಸಿಲಿಂಡರ್‌ಗೆ ಸಂಬಂಧಿಸಿದ ಸಬ್ಸಿಡಿಯು ನೇರವಾಗಿ ಗ್ರಾಹಕರಿಗೆ ವರ್ಗಾವಣೆ ಆಗುತ್ತದೆಯೇ ವಿನಾ ಅದು ಯಾವುದೇ ಕಂಪನಿಗೆ ಸಿಗುವುದಿಲ್ಲ. ಹಾಗಾಗಿ, ಕಂಪನಿಯ ಮಾಲೀಕತ್ವ ಯಾರ ಕೈಯಲ್ಲಿ ಇರುತ್ತದೆ ಎಂಬುದಕ್ಕೆ ಈ ವಿಚಾರದಲ್ಲಿ ಮಹತ್ವ ಇಲ್ಲ’ ಎಂದು ಪ್ರಧಾನ್ ಹೇಳಿದ್ದಾರೆ.

ಸರ್ಕಾರವು ತಾನು ಬಿಪಿಸಿಎಲ್‌ನಲ್ಲಿ ಹೊಂದಿರುವ ಶೇಕಡ 53ರಷ್ಟು ಷೇರುಗಳನ್ನು ಮಾರಾಟ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT