ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ–ಉಕ್ರೇನ್ ಸಂಘರ್ಷ: ಬ್ರೆಂಟ್‌ ಕಚ್ಚಾ ತೈಲ ಬೆಲೆ 110 ಡಾಲರ್‌ಗೆ ಏರಿಕೆ

Last Updated 2 ಮಾರ್ಚ್ 2022, 6:06 IST
ಅಕ್ಷರ ಗಾತ್ರ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಆರಂಭವಾದ ಬಳಿಕ ಏರುಮುಖವಾಗಿ ಸಾಗಿದ್ದ ಬ್ರೆಂಟ್ ಕಚ್ಚಾ ತೈಲ ಬೆಲೆ ಬುಧವಾರ ಬ್ಯಾರೆಲ್‌ಗೆ 110 ಡಾಲರ್‌ಗೆ ಏರಿಕೆಯಾಗಿದೆ. 2014ರ ಬಳಿಕ ಇದೇ ಮೊದಲ ಬಾರಿ ಬ್ರೆಂಟ್ ಕಚ್ಚಾ ತೈಲ ಈ ಮಟ್ಟಕ್ಕೆ ಏರಿಕೆಯಾಗಿದೆ.

ರಷ್ಯಾ ಮೇಲೆ ಜಾಗತಿಕ ಮಟ್ಟದಲ್ಲಿ ಹೇರಲಾಗಿರುವ ಆರ್ಥಿಕ ನಿರ್ಬಂಧಗಳು, ಯುದ್ಧದಿಂದಾಗಿ ವಿಶ್ವಮಟ್ಟದಲ್ಲಿ ಇಂಧನ ಪೂರೈಕೆ ಮೇಲೆ ಆಗಿರುವ ಪರಿಣಾಮಗಳು ದರ ಏರಿಕೆಗೆ ಕಾರಣ ಎನ್ನಲಾಗಿದೆ.

ಅಮೆರಿಕ ಸೇರಿದಂತೆ ಅನೇಕ ದೇಶಗಳು ರಷ್ಯಾ ಮೇಲೆ ಸರಣಿ ನಿರ್ಬಂಧಗಳನ್ನು ಹೇರಿದ್ದು, ಆ ದೇಶದ ಆರ್ಥಿಕತೆ ಕುಸಿಯುವಂತೆ ಮಾಡುವುದಾಗಿ ಹೇಳಿವೆ. ಈ ಕ್ರಮಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ.

ರಷ್ಯಾವು ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕ ದೇಶವಾಗಿದೆ. ರಷ್ಯಾ ಮೇಲೆ ಹೇರಲಾಗಿರುವ ರಫ್ತು ನಿರ್ಬಂಧಗಳು ಆ ದೇಶದಿಂದ ತೈಲ ಪೂರೈಕೆಗೆ ಅಡಚಣೆ ಉಂಟುಮಾಡಿದೆ.

ಕೋವಿಡ್ ಸಾಂಕ್ರಾಮಿಕ, ಲಾಕ್‌ಡೌನ್‌ ಕ್ರಮಗಳಿಂದ ಜಾಗತಿಕ ಮಟ್ಟದಲ್ಲಿ ಹೊಡೆತಕ್ಕೆ ಒಳಗಾಗಿದ್ದ ಆರ್ಥಿಕ ಚಟುವಟಿಕೆಗಳು ಇದೀಗ ಪುನರಾರಂಭಗೊಳ್ಳುತ್ತಿದ್ದು, ತೈಲ ಬೇಡಿಕೆಯೂ ಹೆಚ್ಚಾಗುತ್ತಿದೆ. ಹೆಚ್ಚಿದ ಬೇಡಿಕೆ ಹಾಗೂ ಪೂರೈಕೆ ಸಮಸ್ಯೆಯಿಂದಾಗಿ ದರವೂ ಗಗನಮುಖಿಯಾಗುತ್ತಿದೆ. ಪೂರ್ವ ಯುರೋಪ್‌ ದೇಶಗಳ ನಡುವಣ ಸಂಘರ್ಷ ಮತ್ತಷ್ಟು ದರ ಏರಿಕೆಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT