ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಗೇಡ್‌ ಗ್ರೂಪ್‌ಗೆ₹ 41 ಕೋಟಿ ಲಾಭ

Last Updated 16 ಆಗಸ್ಟ್ 2019, 11:15 IST
ಅಕ್ಷರ ಗಾತ್ರ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಸಂಸ್ಥೆ ಬ್ರಿಗೇಡ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ನ ವರಮಾನವು ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 717 ಕೋಟಿಗಳಷ್ಟಾಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿನ ವರಮಾನವು ₹ 708 ಕೋಟಿಗಳಷ್ಟಿತ್ತು. ನಿವ್ವಳ ಲಾಭವು ₹ 41 ಕೋಟಿಗಳಷ್ಟಾಗಿದೆ. ಬಡ್ಡಿ ಪಾವತಿ ಮತ್ತು ಸವಕಳಿ ಹೆಚ್ಚಳದ ಕಾರಣಕ್ಕೆ ನಿವ್ವಳ ಲಾಭವು ಹಿಂದಿನ ವರ್ಷದ ₹ 63 ಕೋಟಿಗಳಿಂದ ಇಳಿಕೆಯಾಗಿದೆ.

‘ರಿಯಲ್‌ ಎಸ್ಟೇಟ್‌ ಮಾರುಕಟ್ಟೆಯಲ್ಲಿ ಮತ್ತು ಆರ್ಥಿಕತೆಯಲ್ಲಿ ಪ್ರತಿಕೂಲ ಪರಿಸ್ಥಿತಿ ಇದ್ದರೂ, ನಮ್ಮ ಹಣಕಾಸು ಮತ್ತು ಕಾರ್ಯನಿರ್ವಹಣೆಯು ಉತ್ತಮವಾಗಿದೆ’ ಎಂದು ಕಂಪನಿಯ ಅಧ್ಯಕ್ಷ ಎಂ. ಆರ್‌. ಜೈಶಂಕರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT