ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳು: ಸುಬ್ರಮಣಿಯನ್‌ ಬೆಂಬಲ

Last Updated 28 ಫೆಬ್ರುವರಿ 2021, 13:39 IST
ಅಕ್ಷರ ಗಾತ್ರ

ಕೋಲ್ಕತ್ತ: ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವಕ್ಕೆ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್‌ ಬೆಂಬಲ ಸೂಚಿಸಿದ್ದಾರೆ.

‘ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ‍್ತಿಗೆ ತರುವುದು ಉತ್ತಮ ನಡೆ. ಆದರೆ, ಆ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ತೆಗೆದುಕೊಳ್ಳಬೇಕಿದೆ’ ಎಂದು ಅವರು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ (ಎಫ್‌ಐಸಿಸಿಐ) ಮಹಿಳಾ ಘಟಕದ (ಎಎಫ್‌ಎಲ್‌ಒ) ಸದಸ್ಯರೊಂದಿಗೆ ಈಚೆಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

‘ಆಹಾರ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಹಣದುಬ್ಬರದ ಒತ್ತಡ ಉಂಟಾಗಿರಬಹುದು’ ಎಂದೂ ಅವರು ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವಂತೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಸಹ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT