ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪತ್ತು ₹2 ಲಕ್ಷ ಕೋಟಿ ಹೆಚ್ಚಳ

ಷೇರುಪೇಟೆ ವಾರದ ವಹಿವಾಟು ಸಕಾರಾತ್ಮಕ ಅಂತ್ಯ
Last Updated 30 ನವೆಂಬರ್ 2019, 16:59 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗುತ್ತಿದ್ದು, ವಾರದ ವಹಿವಾಟು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿಯೇ ಅಂತ್ಯಗೊಂಡಿದೆ.

ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 434 ಅಂಶ ಹೆಚ್ಚಾಗಿ 40,794 ಅಂಶಗಳಿಗೆ ತಲುಪಿದೆ.

ಹೂಡಿಕೆದಾರರ ಸಂಪತ್ತು ₹ 2.02 ಲಕ್ಷ ಕೋಟಿಗಳಷ್ಟು ಏರಿಕೆಯಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 152.73 ಲಕ್ಷ ಕೋಟಿಗಳಿಂದ ₹ 154.75 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 142 ಅಂಶ ಹೆಚ್ಚಾಗಿದ್ದು, 12,056 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಗೊಂಡಿದೆ.

ಎಫ್‌ಪಿಐ ಒಳಹರಿವು: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ವಾರದ ವಹಿವಾಟಿನಲ್ಲಿ
₹ 7,071 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 3 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ ₹71.74ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT