ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ವರ್ಷಗಳಲ್ಲಿ ಬಿಎಸ್‌ಎನ್‌ಎಲ್‌ 4ಜಿ: ಸಂಜಯ್ ಧೋತ್ರೆ

Last Updated 17 ಮಾರ್ಚ್ 2021, 16:16 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ಕಂಪನಿಯು 4ಜಿ ಸೇವೆ ಒದಗಿಸುವ ಕಾರ್ಯವು ಇನ್ನು 18ರಿಂದ 24 ತಿಂಗಳುಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಕೇಂದ್ರವು ಸಂಸತ್ತಿಗೆ ತಿಳಿಸಿದೆ.

ಬಿಎಸ್‌ಎನ್‌ಎಲ್‌ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡುವ ಯಾವ ಆಲೋಚನೆಯೂ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ದೂರಸಂಪರ್ಕ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಅವರು ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.

ದೇಶದಲ್ಲಿ 2ಜಿ ಮೊಬೈಲ್‌ ಸಂಪರ್ಕ ವ್ಯವಸ್ಥೆಯನ್ನು ಕೊನೆಗೊಳಿಸುವ ಇರಾದೆ ಇದೆಯೇ ಎಂಬ ಪ್ರಶ್ನೆಗೆ ಧೋತ್ರೆ ಅವರು, ‘ಹಾಗೇನೂ ಇಲ್ಲ’ ಎಂದು ಉತ್ತರಿಸಿದ್ದಾರೆ. ಯಾವ ತಂತ್ರಜ್ಞಾನವನ್ನು ಬಳಸಿ ಸೇವೆಗಳನ್ನು ನೀಡಬೇಕು ಎಂಬುದು ದೂರಸಂಪರ್ಕ ವಲಯದ ಕಂಪನಿಗಳ ಆಯ್ಕೆಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT