ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಎನ್‌ಎಲ್‌ ಸ್ವಯಂ ನಿವೃತ್ತಿ ಯೋಜನೆ ಜಾರಿ

Last Updated 6 ನವೆಂಬರ್ 2019, 11:59 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಗಳಾದ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ ಸಂಸ್ಥೆಗಳು ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್‌ಎಸ್‌) ಜಾರಿಗೊಳಿಸಿವೆ.

70 ಸಾವಿರದಿಂದ 80 ಸಾವಿರ ಸಿಬ್ಬಂದಿ ವಿಆರ್‌ಎಸ್‌ ಪಡೆಯುವ ನಿರೀಕ್ಷೆ ಇದೆ. ಇದರಿಂದ ಸಂಸ್ಥೆಯ ವೇತನ ವೆಚ್ಚದಲ್ಲಿ ₹ 7 ಸಾವಿರ ಕೋಟಿ ಉಳಿತಾಯವಾಗಲಿದೆ ಎಂದು ತಿಳಿಸಿದೆ.

’ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಲು ನವೆಂಬರ್‌ 4ರಿಂದಲೇ ಅವಕಾಶ ಕಲ್ಪಿಸಲಾಗಿದ್ದು, ಡಿಸೆಂಬರ್‌ 3ರವರೆಗೆ ಕಾಲಮಿತಿ ಇದೆ. ಈ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ’ ಎಂದು ಬಿಎಸ್‌ಎನ್‌ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಪುರವರ್‌ ತಿಳಿಸಿದ್ದಾರೆ. ಎಂಟಿಎನ್‌ಎಲ್‌ ಸಿಬ್ಬಂದಿಗೂ ಇದೇ ಕಾಲಮಿತಿ ಅನ್ವಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT