ನವದೆಹಲಿ (ಪಿಟಿಐ): ಬಿಎಸ್‌ಎನ್‌ಎಲ್ ಸಿಬ್ಬಂದಿ ಒಕ್ಕೂಟವು ಸೋಮವಾರ ದೇಶದಾದ್ಯಂತ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದೆ.

ಸ್ವಯಂ ನಿವೃತ್ತಿ ಯೋಜನೆಗೆ (ವಿಆರ್‌ಎಸ್) ಸೇರುವಂತೆ ಆಡಳಿತ ಮಂಡಳಿಯು ಸಿಬ್ಬಂದಿ ಮೇಲೆ ಒತ್ತಡ ತರುತ್ತಿದೆ ಎಂದು ಆರೋಪಿಸಿದ್ದು, ಈ ನಿರ್ಧರಕ್ಕೆ ಬಂದಿದೆ.

‘ಯೋಜನೆಯನ್ನು ಆಯ್ಕೆ ಮಾಡಿಕೊಳ್ಳದೇ ಇದ್ದರೆ ದೂರದ ಊರಿಗೆ ವರ್ಗಾವಣೆ ಮಾಡುವುದಾಗಿ ಸಿಬ್ಬಂದಿಗೆ ಬೆದರಿಕೆ ಒಡ್ಡಲಾಗುತ್ತಿದೆ’ ಎಂದು ಸಂಸ್ಥೆಯ ಅಖಿಲ ಭಾರತ ಒಕ್ಕೂಟ ಮತ್ತು ಸಂಘದ (ಎಯುಎಬಿ) ಸಂಚಾಲಕ ಪಿ. ಅಭಿಮನ್ಯು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 3ರವರೆಗೂ ಯೋಜನೆಗೆ ಸೇರಲು ಅವಕಾಶ ಕಲ್ಪಿಸಲಾಗಿದೆ.

ಸದ್ಯ 77 ಸಾವಿರಕ್ಕೂ ಅಧಿಕ ಸಿಬ್ಬಂದಿ ವಿಆರ್‌ಎಸ್ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.