ಸೋಮವಾರ, ಮಾರ್ಚ್ 30, 2020
19 °C

ಬಿಎಸ್‌ಎನ್‌ಎಲ್‌: ಇಂದು ಸತ್ಯಾಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಿಎಸ್‌ಎನ್‌ಎಲ್‌ ಸಿಬ್ಬಂದಿ ಒಕ್ಕೂಟವು ಸೋಮವಾರ ದೇಶದಾದ್ಯಂತ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದೆ.

ಸ್ವಯಂ ನಿವೃತ್ತಿ ಯೋಜನೆಗೆ (ವಿಆರ್‌ಎಸ್‌) ಸೇರುವಂತೆ ಆಡಳಿತ ಮಂಡಳಿಯು ಸಿಬ್ಬಂದಿ ಮೇಲೆ ಒತ್ತಡ ತರುತ್ತಿದೆ ಎಂದು ಆರೋಪಿಸಿದ್ದು, ಈ ನಿರ್ಧರಕ್ಕೆ ಬಂದಿದೆ.

‘ಯೋಜನೆಯನ್ನು ಆಯ್ಕೆ ಮಾಡಿಕೊಳ್ಳದೇ ಇದ್ದರೆ ದೂರದ ಊರಿಗೆ ವರ್ಗಾವಣೆ ಮಾಡುವುದಾಗಿ ಸಿಬ್ಬಂದಿಗೆ ಬೆದರಿಕೆ ಒಡ್ಡಲಾಗುತ್ತಿದೆ’ ಎಂದು ಸಂಸ್ಥೆಯ ಅಖಿಲ ಭಾರತ ಒಕ್ಕೂಟ ಮತ್ತು ಸಂಘದ (ಎಯುಎಬಿ) ಸಂಚಾಲಕ ಪಿ. ಅಭಿಮನ್ಯು ಅವರು ಆರೋಪಿಸಿದ್ದಾರೆ.

ಡಿಸೆಂಬರ್‌ 3ರವರೆಗೂ ಯೋಜನೆಗೆ ಸೇರಲು ಅವಕಾಶ ಕಲ್ಪಿಸಲಾಗಿದೆ.

ಸದ್ಯ 77 ಸಾವಿರಕ್ಕೂ ಅಧಿಕ ಸಿಬ್ಬಂದಿ ವಿಆರ್‌ಎಸ್‌ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು