ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ ಮಾರುಕಟ್ಟೆಗೆ ದಾಖಲೆಯ ಆವಕ

Last Updated 18 ಫೆಬ್ರುವರಿ 2021, 22:15 IST
ಅಕ್ಷರ ಗಾತ್ರ

ಬ್ಯಾಡಗಿ (ಹಾವೇರಿ): ಇಲ್ಲಿಯ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಗುರುವಾರ 2.47 ಲಕ್ಷ ಚೀಲ (61,782 ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿದೆ. ಇದು ಈ ಹಂಗಾಮಿನ ದಾಖಲೆ.

ಸೋಮವಾರ ಬ್ಯಾಡಗಿ ಪಟ್ಟಣದಲ್ಲಿ ನಡೆಯಲಿರುವ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರುಕಟ್ಟೆ ವಹಿವಾಟು ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮೆಣಸಿನಕಾಯಿ ಚೀಲಗಳನ್ನು ಮಾರಾಟಕ್ಕೆ ತರಲಾಗಿದ್ದು, ರಸ್ತೆಯ ಮೇಲೆಯೇ ಟೆಂಡರ್‌ಗೆ ಇಡಲಾಗಿತ್ತು.

ಸಾವಯವ ಕೃಷಿ ಪದ್ಧತಿಯಲ್ಲಿಬೆಳೆದ ಎರಡು ಚೀಲ (50 ಕೆ.ಜಿ) ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹70,111 ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿದೆ. ಒಟ್ಟು 323 ವರ್ತಕರು ಟೆಂಡರ್‌ನಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT