ಬ್ಯಾಡಗಿ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಏ.23ರಂದು 38,515 ಚೀಲ (9,628 ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿದ್ದು, ಆವಕದಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ಕೋಲ್ಡ್ ಸ್ಟೋರೇಜ್ನಲ್ಲಿ ಸಂಗ್ರಹಿಸಿದ ಮೆಣಸಿನಕಾಯಿ ಹೆಚ್ಚು ಮಾರಾಟವಾಗಿದೆ. ಕಳೆದ ಸೋಮವಾರ ಬಸವಜಯಂತಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ರಜೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಹೆಚ್ಚಿನ ಆವಕವಾಗಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ.

ಏ.16ರಂದು ಮಾರುಕಟ್ಟೆಯಲ್ಲಿ 38,211 ಚೀಲ (9,552 ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿತ್ತು. ಏ.23ರಂದು ಮಾರುಕಟ್ಟೆಯಲ್ಲಿ 4,587 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್ಗೆ ಇಡಲಾಗಿದ್ದು, ತೇವಾಂಶ ಹೆಚ್ಚಿರುವ ಹಾಗೂ ಕಡಿಮೆ ಗುಣಮಟ್ಟದ 133 ಲಾಟ್ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ. 11 ಚೀಲ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ಗೆ ₹56,799, 6 ಚೀಲ ಕಡ್ಡಿ ಮೆಣಸಿನಕಾಯಿ ₹59,219 ಹಾಗೂ ಗುಂಟೂರು ತಳಿ ₹17,509 ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿವೆ. ಡಬ್ಬಿ ಮತ್ತು ಗುಂಟೂರು ತಳಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಆದರೆ ಕಡ್ಡಿ ಮೆಣಸಿನಕಾಯಿ ಗರಿಷ್ಠ ಬೆಲೆಯಲ್ಲಿ ತುಸು ಹೆಚ್ಚಳ ಕಂಡು ಬಂದಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಕಡ್ಡಿ ₹46,509, ಬ್ಯಾಡಗಿ ಡಬ್ಬಿ ₹47,819 ಹಾಗೂ ಗುಂಟೂರ ತಳಿ ₹12,509ಕ್ಕೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು 290 ಖರೀದಿ ವರ್ತಕರು ಪಾಲ್ಗೊಂಡಿದ್ದರು ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-22-915567726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.