ಬ್ಯಾಡಗಿ: ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಯಲ್ಲಿ ಮಾ.5ರಂದು 1,20,446 ಚೀಲ (30,111ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿದೆ. ಆದರೆ ಗರಿಷ್ಠ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.

ಸೋಮವಾರ ಮಾರುಕಟ್ಟೆಯಲ್ಲಿ 1,46,126 ಚೀಲ (36,531ಕ್ವಿಂಟಲ್) ಮಾರಾಟವಾಗಿದ್ದವು. ಒಟ್ಟಾರೆ ಕಳೆದ ವಾರ ಮಾರುಕಟ್ಟೆಯಲ್ಲಿ 2,90,783 ಚೀಲ (72,695 ಕ್ವಿಂಟಲ್) ಮೆಣಸಿನಕಾಯಿ ಮಾರಾಟವಾಗಿದ್ದವು.

ಮಾ.5ರಂದು ಮಾರುಕಟ್ಟೆಯಲ್ಲಿ ಒಟ್ಟು 13,041 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್ಗೆ ಇಡಲಾಗಿದ್ದು, ತೇವಾಂಶ ಹೆಚ್ಚಿರುವ ಹಾಗೂ ಕಡಿಮೆ ಗುಣಮಟ್ಟದ 234 ಲಾಟ್ಗಳಿಗೆ ವರ್ತಕರು ಟೆಂಡರ್ ನಮೂದಿಸಿಲ್ಲ. ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ಗೆ ₹60,599 ರಂತೆ, ಕಡ್ಡಿ ಮೆಣಸಿನಕಾಯಿ ₹62,199ರಂತೆ ಮತ್ತು ಗುಂಟೂರು ತಳಿ ₹18,109ರಂತೆ ಗರಿಷ್ಠ ಬೆಲೆಯಲ್ಲಿ ಮಾರಾಟವಾಗಿ ಸ್ಥಿರತೆ ಕಾಯ್ದುಕೊಂಡಿದೆ. ಸರಾಸರಿ ಬೆಲೆಯಲ್ಲಿ ಬ್ಯಾಡಗಿ ಕಡ್ಡಿ ₹48,509, ಬ್ಯಾಡಗಿ ಡಬ್ಬಿ ₹52,009 ಹಾಗೂ ಗುಂಟೂರ ತಳಿ ₹14,159ರಂತೆ ಮಾರಾಟವಾಗಿವೆ. ಇಂದಿನ ಟೆಂಡರ್ ಪ್ರಕ್ರಿಯೆಯಲ್ಲಿ ಒಟ್ಟು419 ಖರೀದಿ ವರ್ತಕರು ಪಾಲ್ಗೊಂಡಿದ್ದರು. ಅವರು ಒಟ್ಟಾರೆ 1.52 ಲಕ್ಷ ಬಾರಿ ದರವನ್ನು ಕೋಟ್ ಮಾಡಿದ್ದಾರೆ ಎಂದು ಎಪಿಎಂಸಿ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260306-22-679502982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.