ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3,500 ಸಿಬ್ಬಂದಿ ವಜಾ ಮಾಡಲಿರುವ ಬೈಜುಸ್

Published 27 ಸೆಪ್ಟೆಂಬರ್ 2023, 13:21 IST
Last Updated 27 ಸೆಪ್ಟೆಂಬರ್ 2023, 13:21 IST
ಅಕ್ಷರ ಗಾತ್ರ

ನವದೆಹಲಿ: ಆನ್‌ಲೈನ್‌ ಮೂಲಕ ಶಿಕ್ಷಣ ನೀಡುವ ಬೈಜುಸ್‌ ಕಂಪನಿಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಗರಿಷ್ಠ 3,500 ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಿದೆ ಎಂದು ಮೂಲಗಳು ಹೇಳಿವೆ.

ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣಕ್ಕೆ ಹೆಚ್ಚು ಬೇಡಿಕೆ ಬಂದಿತ್ತು. ಹಾಗಾಗಿ ಕಂಪನಿಯು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಂಡಿತ್ತು. ಆದರೆ, ಈಗ ಬೇಡಿಕೆ ಇಳಿಕೆ ಆಗಿರುವುದರಿಂದ ಕಂಪನಿಯು ಹೆಚ್ಚುವರಿ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವಂತಾಗಿದೆ ಎಂದು ತಿಳಿಸಿವೆ.

ಕಂಪನಿಯು ಬೇಡಿಕೆಗಳಿಗೆ ಅನುಗುಣವಾಗಿ ಕಾರ್ಯಾಚರಣೆಯಲ್ಲಿ ಮರುಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಅಕ್ಟೋಬರ್‌ ಅಂತ್ಯದ ವೇಳೆಗೆ ಸಿಬ್ಬಂದಿ ತೆಗೆಯುವ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಮಾಡಲಾಗಿದೆ ಎಂದೂ ಹೇಳಿವೆ.

ವಹಿವಾಟಿನ ಸ್ವರೂಪದಲ್ಲಿ ಒಂದಿಷ್ಟು ಬದಲಾವಣೆ ಮಾಡಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ. ಕಾರ್ಯಾಚರಣೆಯನ್ನು ಇನ್ನಷ್ಟು ಸುಲಭಗೊಳಿಸುವ ಮತ್ತು ವೆಚ್ಚ ತಗ್ಗಿಸುವ ಕೆಲಸ ನಡೆಯುತ್ತಿದೆ. ಹೊಸ ಸಿಇಒ ಅರ್ಜುನ್‌ ಮೋಹನ್‌ ಅವರು ಕೆಲವೇ ವಾರಗಳಲ್ಲಿ ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದಾರೆ ಎಂದು ಕಂಪನಿಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT