ಮಂಗಳವಾರ, ಸೆಪ್ಟೆಂಬರ್ 28, 2021
21 °C

ಬ್ಯಾಂಕ್‌ ಠೇವಣಿಗೆ ವಿಮೆ: ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬ್ಯಾಂಕ್‌ಗಳಲ್ಲಿ ಹಣ ಠೇವಣಿ ಇರಿಸುವವರಿಗೆ ಹೆಚ್ಚಿನ ನೆರವು ನೀಡುವ ಉದ್ದೇಶದಿಂದ ‘ಠೇವಣಿ ವಿಮೆ ಮತ್ತು ಸಾಲ ಖಾತರಿ ಕಾರ್ಪೊರೇಷನ್ ಕಾಯ್ದೆ’ಗೆ (ಡಿಐಸಿಜಿಸಿ ಕಾಯ್ದೆ) ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ತಿದ್ದುಪಡಿಯು ಕಾಯ್ದೆಯ ಭಾಗವಾದ ನಂತರ, ಬ್ಯಾಂಕ್‌ ಮೇಲೆ ಆರ್‌ಬಿಐ ನಿರ್ಬಂಧ ವಿಧಿಸಿದರೆ ಠೇವಣಿದಾರರಿಗೆ 90 ದಿನಗಳಲ್ಲಿ ₹ 5 ಲಕ್ಷದವರೆಗೆ ವಿಮಾ ಪರಿಹಾರ ಮೊತ್ತ ಸಿಗಲಿದೆ.

ಬ್ಯಾಂಕ್‌ ಠೇವಣಿದಾರರಿಗೆ ಹೆಚ್ಚಿನ ವಿಮಾ ಪರಿಹಾರ ಮೊತ್ತ ಕೊಡಿಸಲು ಈ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು.

ತಿದ್ದುಪಡಿ ಮಸೂದೆಯನ್ನು ಸಂಸತ್ತಿನ ಹಾಲಿ ಅಧಿವೇಶನದಲ್ಲೇ ಮಂಡಿಸುವ ಸಾಧ್ಯತೆ ಇದೆ ಎಂದು ನಿರ್ಮಲಾ ಅವರು ತಿಳಿಸಿದರು. ಇದು ಕಾಯ್ದೆಯಾದ ನಂತರ, ಪಿಎಂಸಿ ಬ್ಯಾಂಕ್ ಹಾಗೂ ಅದರಂತಹ ಇತರ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿದವರಿಗೆ ನೆರವು ಸಿಗಲಿದೆ. ಈಗಿರುವ ನಿಯಮಗಳ ಅನ್ವಯ, ಬ್ಯಾಂಕ್‌ನ ಪರವಾನಗಿ ರದ್ದಾಗಿ, ಬ್ಯಾಂಕಿಂಗ್‌ ಕಂಪನಿಯನ್ನು ಪರಿಸಮಾಪ್ತಿಗೊಳಿಸಿ, ಅದರ ಆಸ್ತಿಗಳನ್ನು ಹಕ್ಕುದಾರರಿಗೆ ವರ್ಗಾಯಿಸುವ ಪ್ರಕ್ರಿಯೆ ಶುರುವಾದ ನಂತರ ವಿಮಾ ಪರಿಹಾರ ಮೊತ್ತವು ಸಿಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು