ಬುಧವಾರ, ಮೇ 27, 2020
27 °C

ಕೆನರಾ ಬ್ಯಾಂಕ್‌ ಬಡ್ಡಿದರ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌, ರೆಪೊ ದರ ಆಧರಿಸಿರುವ ಸಾಲಗಳ ಮೇಲಿನ ಬಡ್ಡಿದರದಲ್ಲಿ (ಆರ್‌ಎಲ್‌ಎಲ್‌ಆರ್) ಶೇ 0.75ರಷ್ಟು ಕಡಿಮೆ ಮಾಡಿದೆ. ಮಂಗಳವಾರದಿಂದ ಶೇ 7.30ರ ಬಡ್ಡಿದರದಲ್ಲಿ ಸಾಲ ಸಿಗಲಿದೆ.

ಠೇವಣಿಗಳ ಮೇಲಿನ ಹೆಚ್ಚುವರಿ ವೆಚ್ಚ ಆಧರಿಸಿದ (ಎಂಸಿಎಲ್‌ಆರ್‌) ಆಧಾರಿತ ಸಾಲದ ಬಡ್ಡಿ ದರದಲ್ಲಿಯೂ ಶೇ 0.35ರವರೆಗೂ ಇಳಿಕೆ ಮಾಡಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೊ ದರವನ್ನು ಶೇ 0.75ರಷ್ಟು ಕಡಿಮೆ ಮಾಡಿರುವುದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಕೆನರಾ ಬ್ಯಾಂಕ್‌ ಈ ನಿರ್ಧಾರ ತೆಗೆದುಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು