ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ಗೆ ₹ 318 ಕೋಟಿ ಲಾಭ

Last Updated 28 ಜನವರಿ 2019, 20:26 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌, ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 318 ಕೋಟಿ ನಿವ್ವಳ ಲಾಭ ಗಳಿಸಿದೆ.

‘ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 126 ಕೋಟಿ ನಿವ್ವಳ ಲಾಭ ಗಳಿಸಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣ ಶೇ 153ರಷ್ಟು ಏರಿಕೆಯಾಗಿದೆ’ ಎಂದು ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ವಿ. ಭಾರತಿ ಅವರು
ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವರಮಾನ ₹ 12,341 ಕೋಟಿಯಿಂದ ₹ 13,513 ಕೋಟಿಗೆ ಏರಿಕೆಯಾಗಿದೆ. ವಸೂಲಾಗದ ಸಾಲದ (ಎನ್‌ಪಿಎ) ನಿವ್ವಳ ಪ್ರಮಾಣ ಶೇ 6.78ರಿಂದ ಶೇ 6.37ಕ್ಕೆ ಇಳಿಕೆಯಾಗಿದೆ.

‘ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹ 2,673 ಕೋಟಿಯಿಂದ ₹ 1,977 ಕೋಟಿಗೆ ಇಳಿಕೆಯಾಗಿದೆ. ಹೀಗಾಗಿ ಲಾಭದಲ್ಲಿ ಏರಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT