ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ನ ನಿವ್ವಳ ಲಾಭವು ಹಿಂದಿನ ಹಣಕಾಸು ವರ್ಷದ ಜೂನ್ ತ್ರೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ಮೂರುಪಟ್ಟು ಹೆಚ್ಚಾಗಿದೆ.

ಬ್ಯಾಂಕ್‌ನ ನಿವ್ವಳ ಲಾಭವು ಹಿಂದಿನ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ₹ 406 ಕೋಟಿ ಆಗಿತ್ತು. ಇದು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ₹ 1,177 ಕೋಟಿಗೆ ಏರಿಕೆ ಕಂಡಿದೆ.

ಬ್ಯಾಂಕ್‌ನ ಒಟ್ಟಾರೆ ವರಮಾನವು ₹ 20,685 ಕೋಟಿಯಿಂದ ₹ 21,210 ಕೋಟಿಗೆ ಏರಿಕೆ ಕಂಡಿದೆ.

ವರ್ಚುವಲ್ ಸುದ್ದಿಗೋಷ್ಠಿ ನಡೆಸಿದ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಲ್.ವಿ. ಪ್ರಭಾಕರ್, ‘ಬ್ಯಾಂಕ್‌ನ ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣವು ಶೇಕಡ 8.84ರಿಂದ ಶೇ 8.50ಕ್ಕೆ ಇಳಿಕೆ ಕಂಡಿದೆ. ನಿವ್ವಳ ಎನ್‌ಪಿಎ ಶೇ 3.95ರಿಂದ ಶೇ 3.46ಕ್ಕೆ ಇಳಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಸಕ್ತ ಹಣಕಾಸು ವರ್ಷದಲ್ಲಿ ವಹಿವಾಟಿನ ಬೆಳವಣಿಗೆಗಾಗಿ ಬಂಡವಾಳ ಸಾಮರ್ಥ್ಯ ವೃದ್ಧಿಸಿಕೊಳ್ಳುವ ಉದ್ದೇಶದಿಂದ ಸಾಲಪತ್ರ ಮತ್ತು ಈಕ್ವಿಟಿ ಮೂಲಕ ಒಟ್ಟಾರೆ ₹ 9 ಸಾವಿರ ಕೋಟಿ ಬಂಡವಾಳ ಸಂಗ್ರಹಿಸುವ ಯೋಜನೆ ಇದೆ ಎಂದೂ ಅವರು ತಿಳಿಸಿದರು.

ಇದನ್ನೂ ಓದಿ... ಆಹಾರ ಸಂಸ್ಕರಣಾ ವಲಯ: ಎಫ್ಡಿಐ ಶೇ 57ರಷ್ಟು ಇಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.