ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ ಲಾಭ ಹೆಚ್ಚಳ

Last Updated 5 ಆಗಸ್ಟ್ 2020, 14:41 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಕೆನರಾ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇಕಡ 23ರಷ್ಟು ಏರಿಕೆಯಾಗಿದೆ. ಬ್ಯಾಂಕ್‌ ₹ 406 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 320 ಕೋಟಿ ಲಾಭ ಗಳಿಸಿತ್ತು. ಒಟ್ಟಾರೆ ವರಮಾನ ₹ 14,062 ಕೋಟಿಗಳಿಂದ ₹ 20,686 ಕೋಟಿಗಳಿಗೆ ಏರಿಕೆಯಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಬ್ಯಾಂಕಿನ ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಮೊತ್ತ ₹ 39,399 ಕೋಟಿಗಳಿಂದ ₹ 57,525 ಕೋಟಿಗಳಿಗೆ ಏರಿಕೆಯಾಗಿದೆ. ನಿವ್ವಳ ಎನ್‌ಪಿಎ ಮೊತ್ತ ₹ 23,150 ಕೋಟಿಗಳಿಂದ ₹ 24,355 ಕೋಟಿಗಳಿಗೆ ಏರಿಕೆಯಾಗಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹ 1,899 ಕೋಟಿಗಳಿಂದ ₹ 3,826 ಕೋಟಿಗಳಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT