ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ಬ್ಯಾಂಕ್‌ಗೆ ನಷ್ಟ

Last Updated 24 ಜೂನ್ 2020, 16:34 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ 2020ರ ಮಾರ್ಚ್‌ ಅಂತ್ಯಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 3,529 ಕೋಟಿ ನಷ್ಟ ಅನುಭವಿಸಿದೆ.

2018–19ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 551 ಕೋಟಿ ನಷ್ಟವಾಗಿತ್ತು.

ತ್ರೈಮಾಸಿಕದಲ್ಲಿ ವರಮಾನವು ₹ 14 ಸಾವಿರ ಕೋಟಿಗಳಿಂದ ₹ 14,222 ಕೋಟಿಗಳಿಗೆ ಏರಿಕೆಯಾಗಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹ 5,375 ಕೋಟಿ ಆಗಿದೆ. ಈ ಹಿಂದೆ ಇದು ₹ 5,523 ಕೋಟಿ ಇತ್ತು.

2019–20ನೇ ಹಣಕಾಸು ವರ್ಷಕ್ಕೆ ನಷ್ಟವು ₹ 2,235 ಕೋಟಿ ಆಗಿದೆ. 2018–19ರಲ್ಲಿ ₹347 ಕೋಟಿ ನಿವ್ವಳ ಲಾಭ ಗಳಿಸಿತ್ತು.

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 8.21ರಷ್ಟಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಶೇ 8.83ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT