ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಅಪರಾಧ ಪ್ರಕರಣ: ತ್ವರಿತ ಇತ್ಯರ್ಥಕ್ಕೆ ನಿರ್ಮಲಾ ಸಲಹೆ

Last Updated 4 ಡಿಸೆಂಬರ್ 2021, 19:43 IST
ಅಕ್ಷರ ಗಾತ್ರ

ನವದೆಹಲಿ: ಕಳ್ಳಸಾಗಣೆಯಂತಹ ಆರ್ಥಿಕ ಅಪರಾಧಗಳನ್ನು ತಡೆಯಲು ಪ್ರತಿಯೊಂದು ಪ್ರಕರಣವನ್ನೂ ತ್ವರಿತವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುಪ್ತಚರ ವಿಭಾಗದ ಅಧಿಕಾರಿಗಳಿಗೆ ಸಲಹೆ ನೀಡಿದರು.

ರೆವಿನ್ಯೂ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಸಂಸ್ಥಾಪನಾ ದಿನದ ಅಂಗವಾಗಿ ಮಾತನಾಡಿದ ಅವರು, ‘ಪ್ರಕರಣದ ತಾರ್ತಿಕ ಅಂತ್ಯ ಬಹಳ ಮುಖ್ಯ ಆದರೆ, ತ್ವರಿತವಾಗಿ ಇತ್ಯರ್ಥಪಡಿಸುವುದರಿಂದ ಆರ್ಥಿಕ ಅಪರಾಧಗಳನ್ನು ಉತ್ತೇಜಿಸುವವರಿಗೆ ಬಿಸಿ ಮುಟ್ಟಿಸಿದಂತಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಅಕ್ರಮ ಚಟುವಟಿಕೆಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲದೆ, ಅಂತಹ ಚಟುವಟಿಕೆಗಳು ನಡೆಯದಂತೆ ತಡೆಯುವುದು ಸಹ ಅಷ್ಟೇ ಮುಖ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಹೀಗಾಗಿ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯುವುದು ಹೇಗೆ ಎನ್ನುವ ಬಗ್ಗೆ ‘ಡಿಆರ್‌ಐ’ನಂತಹ ಸಂಸ್ಥೆಗಳು ಸಲಹೆ ನೀಡಬಹುದು ಎಂದು ನಿರ್ಮಲಾ ಹೇಳಿದರು.

ಸಮದ್ರತೀರದಲ್ಲಿ ಭಾರಿ ಪ್ರಮಾಣದಲ್ಲಿ ವಿಷಕಾರಿ ತ್ಯಾಜ್ಯಗಳನ್ನು ಸುರಿಯಲಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಡಿಆರ್‌ಐ ಅಧಿಕಾರಿಗಳು ಹೆಚ್ಚು ಸಕ್ರಿಯ ಆಗುವ ಅಗತ್ಯವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT