ನವದೆಹಲಿ: ಬೆಂಗಳೂರಿನ ಮಾನವ ಸಂಪನ್ಮೂಲ ಕಂಪನಿಯೊಂದು ₹ 880 ಕೋಟಿ ಆದಾಯವನ್ನು ಮುಚ್ಚಿಟ್ಟಿದೆ ಎಂದು ಆದಾಯ ತೆರಿಗೆ ಇಲಾಖೆ ಆರೋಪಿಸಿದೆ. ಆದರೆ, ಕ್ವೆಸ್ ಕಾರ್ಪ್ ಲಿಮಿಟೆಡ್ ಹೆಸರಿನ ಈ ಕಂಪನಿಯು ಆರೋಪವನ್ನು ಅಲ್ಲಗಳೆದಿದೆ.
ಆದಾಯ ತೆರಿಗೆ ಇಲಾಖೆಯು ಜುಲೈ 8ರಂದು ಕಂಪನಿಗೆ ಸೇರಿದ ಎರಡು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ಕಂಪನಿಯು 2021ರಲ್ಲಿ ಒಟ್ಟು ₹ 2,900 ಕೋಟಿಯನ್ನು ತೆರಿಗೆ ಮತ್ತು ಶಾಸನಬದ್ಧ ಕೊಡುಗೆ ರೂಪದಲ್ಲಿ ಸರ್ಕಾರಕ್ಕೆ ಪಾವತಿಸಿದೆ’ ಎಂದು ಕಂಪನಿ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.