ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಲಕ್ಷ ಲಂಚ: ಎನ್‌ಎಚ್‌ಎಐ ಪ್ರಧಾನ ವ್ಯವಸ್ಥಾಪಕ ಸೆರೆ

Published 3 ಮಾರ್ಚ್ 2024, 15:42 IST
Last Updated 3 ಮಾರ್ಚ್ 2024, 15:42 IST
ಅಕ್ಷರ ಗಾತ್ರ

ನವದೆಹಲಿ: ಖಾಸಗಿ ಕಂಪನಿಯೊಂದರಿಂದ ₹20 ಲಕ್ಷ ಲಂಚ ಪಡೆಯುತ್ತಿದ್ದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಪ್ರಧಾನ ವ್ಯವಸ್ಥಾಪಕರೊಬ್ಬರನ್ನು, ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಯೋಜನಾ ನಿರ್ದೇಶಕರೂ ಆಗಿರುವ ಅರವಿಂದ ಕಾಳೆ ಬಂಧಿತ. ಮಹಾರಾಷ್ಟ್ರದ ನಾಗ್ಪುರದಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬಂಧಿಸಲಾಗಿದ್ದು, ಲಂಚದ ಹಣ ಸೇರಿ ಒಟ್ಟು ₹45 ಲಕ್ಷವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಕಾಳೆ ಸೇರಿದಂತೆ ಇತರೆ 11 ಮಂದಿ ಹಾಗೂ ಖಾಸಗಿ ಕಂಪನಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT