ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣ: ದೇಶದ 10ಕ್ಕೂ ಅಧಿಕ ಕಡೆ ಸಿಬಿಐ ಶೋಧ

Last Updated 21 ಮೇ 2022, 8:09 IST
ಅಕ್ಷರ ಗಾತ್ರ

ಮುಂಬೈ: ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ ದೇಶದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ, ಗಾಂಧಿನಗರ, ದೆಹಲಿ, ನೊಯಿಡಾ, ಗುರುಗ್ರಾಮ ಮತ್ತು ಕೋಲ್ಕತ್ತಾ ಸೇರಿದಂತೆ ಹಲವು ನಗರಗಳಲ್ಲಿ ಶೋಧ ನಡೆಯುತ್ತಿದೆ.

ಈ ಪ್ರಕರಣದಲ್ಲಿ ಎನ್‌ಎಸ್‌ಇ ಮಾಜಿ ಸಿಇಒ ಮತ್ತು ಎಂಡಿ ಚಿತ್ರಾ ರಾಮಕೃಷ್ಣ ಹಾಗೂ ಸಿಒಒ ಆನಂದ್ ಸುಬ್ರಮಣಿಯನ್ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದೆ.

2010 ರಿಂದ 2015ರವರೆಗೆ ಚಿತ್ರಾ ರಾಮಕೃಷ್ಣ ಅವರು ಎನ್‌ಎಸ್‌ಇ ವ್ಯವಹಾರಗಳನ್ನು ನಿರ್ವಹಿಸುತ್ತಿದ್ದ ಕಾಲಾವಧಿಯ ತನಿಖೆ ಪೂರ್ಣಗೊಂಡಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿರುವ ಆರೋಪಿಗಳ ಪೈಕಿ ಒಂದಾದ ಒಪಿಜಿ ಸೆಕ್ಯುರಿಟೀಸ್ ಸಂಸ್ಥೆಯು, ಎನ್‌ಎಸ್‌ಇಯ ಫ್ಯೂಚರ್ಸ್ ಮತ್ತು ಆಪ್ಷನ್ಸ್‌ ವಿಭಾಗಕ್ಕೆ 670 ದಿನಗಳ ಕಾಲ ದ್ವಿತೀಯ ಪಿಒಪಿ ಸರ್ವರ್‌ ಮೂಲಕ ಸಂಪರ್ಕ ಹೊಂದಿತ್ತು ಎಂಬುದು ಈವರೆಗಿನ ತನಿಖೆಯಲ್ಲಿ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT