ನವದೆಹಲಿ: ಬ್ಯಾಂಕ್‌ಗಳಲ್ಲಿ ಜನ್‌ಧನ್ ಖಾತೆ ತೆರೆಯಲು ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಹಣಕಾಸು ಸೇರ್ಪಡೆಯ ಈ ಮಹತ್ವಾಕಾಂಕ್ಷೆಯ ಯೋಜನೆಗೆ 2014ರ ಆಗಸ್ಟ್‌ನಲ್ಲಿ ಚಾಲನೆ ನೀಡಲಾಗಿತ್ತು. ಈ ಯೋಜನೆಯ ಯಶಸ್ಸಿನಿಂದ ಉತ್ತೇಜನಗೊಂಡಿರುವ ಕೇಂದ್ರ ಸರ್ಕಾರ, ಖಾತೆ ತೆರೆಯುವವರಿಗೆ ಉತ್ತೇಜನ ನೀಡಲು ನಿರ್ಧರಿಸಿದೆ. ‘ಪ್ರತಿ ಕುಟುಂಬ ಮತ್ತು ಪ್ರತಿಯೊಬ್ಬ ವಯಸ್ಕ ಇಂತಹ ಖಾತೆ ತೆರೆಯುವಂತೆ ಪ್ರೋತ್ಸಾಹ ನೀಡಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಈ ಖಾತೆದಾರರಿಗೆ ಒದಗಿಸುತ್ತಿದ್ದ ಹೆಚ್ಚುವರಿ ಸಾಲ ಸೌಲಭ್ಯದ ಮೊತ್ತವನ್ನು (ಓವರ್‌ಡ್ರಾಫ್ಟ್) ದುಪ್ಪಟ್ಟುಗೊಳಿಸಿ ₹ 10 ಸಾವಿರಕ್ಕೆ ಏರಿಸಲಾಗಿದೆ. ಉಚಿತ ಅಪಘಾತ ವಿಮೆಯ ಮೊತ್ತವನ್ನು ₹ 1 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ₹ 2 ಸಾವಿರವರೆಗಿನ ಓವರ್‌ಡ್ರಾಫ್ಟ್‌ಗೆ ಯಾವುದೇ ಷರತ್ತು ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಗರಿಷ್ಠ ವಯೋಮಿತಿಯನ್ನು 60 ವರ್ಷಗಳಿಂದ 65 ವರ್ಷಗಳಿಗೆ ಹೆಚ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.