ನವದೆಹಲಿ : ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೆ (2023ರ ಮಾರ್ಚ್ 31) ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತವು ₹ 155.8 ಲಕ್ಷ ಕೋಟಿ (ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇಕಡ 57.3ರಷ್ಟು ) ಆಗುವ ಅಂದಾಜು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದಾರೆ.
ಒಟ್ಟು ಸಾಲದ ಮೊತ್ತದಲ್ಲಿ ವಿದೇಶಿ ಸಾಲದ ಮೊತ್ತವು ಸದ್ಯ ಇರುವ ವಿನಿಮಯ ದರದ ಆಧಾರದಲ್ಲಿ ₹ 7.03 ಲಕ್ಷ ಕೋಟಿ (ಜಿಡಿಪಿಯ ಶೇ 2.6) ಆಗಲಿದೆ ಎಂದು ಅವರು ಹೇಳಿದ್ದಾರೆ. ಒಟ್ಟು ಸಾಲದಲ್ಲಿ ವಿದೇಶಿ ಸಾಲದ ಪ್ರಮಾಣವು ಶೇ 4.5ರಷ್ಟು ಇದೆ ಎಂದು ಅವರು ಹೇಳಿದ್ದಾರೆ.
ವಿದೇಶಿ ಹೂಡಿಕೆಯ ಮೂಲಗಳನ್ನು ವಿಸ್ತರಿಸಲು ಆರ್‌ಬಿಐನ ಸಲಹೆಯ ಮೇರೆಗೆ ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ವಿನಿಮಯ ದರದಲ್ಲಿನ ಏರಿಳಿತ ಮತ್ತು ಜಾಗತಿಕ ಪರಿಣಾಮಗಳನ್ನು ನಿಭಾಯಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪೂರ್ವಾನುಮತಿ ಇಲ್ಲದೇ ಪಡೆಯುವ ವಿದೇಶಿ ವಾಣಿಜ್ಯ ಸಾಲದ ಮಿತಿಯನ್ನು 1.5 ಬಿಲಿಯನ್ ಡಾಲರ್‌ಗೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.