ನವದೆಹಲಿ: ‘ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಯಾವುದೇ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ’ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚಿನ ಸಾಲ ನೀಡುವುದು ಸೇರಿದಂತೆ ರೈತರ ಆರ್ಥಿಕ ಸ್ಥಿತಿ ಸದೃಢಗೊಳಿಸಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ₹3 ಲಕ್ಷದವರೆಗೆ ಬೆಳೆ ಸಾಲವನ್ನು ಸಬ್ಸಿಡಿ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದು, ಸಕಾಲಿಕ ಮರುಪಾವತಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಅವರು ಲಿಖಿತ ಉತ್ತರದಲ್ಲಿ ಹೇಳಿದ್ದಾರೆ.

ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಅಲ್ಪಾವಧಿಗೆ ಅಡಮಾನರಹಿತವಾಗಿ ನೀಡುವ ಸಾಲವನ್ನು ₹1.60 ಲಕ್ಷದಿಂದ ₹2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಆದ್ಯತಾ ವಲಯ ಸಾಲ ಮಾರ್ಗಸೂಚಿಗಳ ಅಡಿಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಕೃಷಿ ಸೇರಿದಂತೆ ಆರ್ಥಿಕತೆಯ ಆದ್ಯತೆಯ ವಲಯಗಳಿಗೆ ಸಾಕಷ್ಟು ಸಾಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.