ನವದೆಹಲಿ: ರೈತರು ಪಿಎಂ–ಕಿಸಾನ್ ಪೋರ್ಟಲ್ನಲ್ಲಿರುವ ತಮ್ಮ ವಿವರಗಳನ್ನು ಪರಿಶೀಲಿಸಬೇಕು, ಇ–ಕೆವೈಸಿ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಪಿಎಂ–ಕಿಸಾನ್ ಯೋಜನೆಯ 22ನೆಯ ಕಂತಿನ ಹಣವನ್ನು ಕೇಂದ್ರ ಸರ್ಕಾರವು ಶುಕ್ರವಾರ ಬಿಡುಗಡೆ ಮಾಡಲಿದೆ.

ಅಸ್ಸಾಂನ ಗುವಾಹಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ–ಕಿಸಾನ್ ಯೋಜನೆಯ ಮೊತ್ತವನ್ನು 9.32 ಕೋಟಿ ರೈತರಿಗೆ ವರ್ಗಾವಣೆ ಮಾಡಲಿದ್ದಾರೆ.

‘ಅಗತ್ಯ ಕಂಡುಬಂದರೆ ಇ–ಕೆವೈಸಿ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಿ. ಆಗ, 22ನೆಯ ಕಂತಿನ ಹಣವು ರೈತರ ಖಾತೆಗೆ ಸರಿಯಾದ ಸಮಯಕ್ಕೆ ಜಮಾ ಆಗುತ್ತದೆ’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.

ಅರ್ಹರಿಗೆ ನೆರವು ಒದಗಿಸುವ ಉದ್ದೇಶದಿಂದ ‘ನಿಮ್ಮ ಸ್ಥಿತಿ ತಿಳಿಯಿರಿ’ (Know Your Status–KYS) ಸೌಲಭ್ಯವನ್ನು ಪೋರ್ಟಲ್ನಲ್ಲಿ ನೀಡಲಾಗಿದೆ. ಇದರ ಮೂಲಕ ಪಾವತಿ ಸ್ಥಿತಿ, ಅರ್ಹತೆ, ಆಧಾರ್ ಜೋಡಣೆ ಮತ್ತು ಇ–ಕೆವೈಸಿ ಸ್ಥಿತಿಯನ್ನು ತಿಳಿಯಬಹುದು.

ರೈತರು ಇ–ಕೆವೈಸಿ ಪ್ರಕ್ರಿಯೆಯನ್ನು ಮನೆಗಳಿಂದಲೇ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವ ಆ್ಯಪ್ ಒಂದನ್ನು ಕೂಡ ಕೇಂದ್ರವು ಬಿಡುಗಡೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.