ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಖಾಸಗಿ ಕ್ರಿಪ್ಟೋಕರೆನ್ಸಿ ನಿಷೇಧ: ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ?

Last Updated 23 ನವೆಂಬರ್ 2021, 16:49 IST
ಅಕ್ಷರ ಗಾತ್ರ

ನವದೆಹಲಿ: ಈ ಬಾರಿಯ ಸಂಸತ್ತಿನಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು 29 ಮಸೂದೆಗಳನ್ನು ಮಂಡಿಸುತ್ತಿದ್ದು, ಅದರಲ್ಲಿ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ಮಸೂದೆಯೂ ಸೇರಿದೆ.

ಆರ್‌ಬಿಐನಿಂದ ಅಧಿಕೃತ ಡಿಜಿಟಲ್ ಕರೆನ್ಸಿ ಬಿಡುಗಡೆಗೆ ಬೇಕಾದ ನಿಯಮಾವಳಿರಚಿಸುವಮೂಲಕ ಭಾರತದಲ್ಲಿನ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸುವ ‘ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021’ಅನ್ನು ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಕ್ರಿಪ್ಟೋ ಕರೆನ್ಸಿ, ನಿಯಂತ್ರಣ, ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಮತ್ತು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ನಿರ್ದೆಶಕರ ಅಧಿಕಾರಾವಧಿ ವಿಸ್ತರಣೆ ಕುರಿತಾದ ಮಸೂದೆಗಳು ನರೇಂದ್ರ ಮೋದಿ ಸರ್ಕಾರವು ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಮಸೂದೆಗಳ ಪಟ್ಟಿಯಲ್ಲಿ ಸೇರಿವೆ.

ಇದರಲ್ಲಿ 26 ಹೊಸ ಮಸೂದೆಗಳಾಗಿದ್ದು, ಪ್ರತಿಭಟನಾನಿರತ ರೈತರು ವಿರೋಧಿಸುತ್ತಿರುವ ವಿದ್ಯುಚ್ಚಕ್ತಿ ತಿದ್ದುಪಡಿ ಮಸೂದೆಯೂ ಸೇರಿದೆ.

ಮುಂದಿನ ಸೋಮವಾರದಿಂದ ಸಂಸತ್ತಿನ ಅಧಿವೇಶನ ಆರಂಭವಾಗುತ್ತಿದ್ದು, ಡಿಸೆಂಬರ್ 23ಕ್ಕೆ ಅಂತ್ಯವಾಗಲಿದೆ.

ಸಂಸತ್ತಿನಲ್ಲಿ ಮಂಡಿಸಲು ಉದ್ದೇಶಿಸಿರುವ ವಿದ್ಯುಚ್ಚಕ್ತಿ ತಿದ್ದುಪಡಿ ಮಸೂದೆಯು ವಿದ್ಯುತ್ ಸರಬರಾಜನ್ನು ಸಂಪೂರ್ಣ ಖಾಸಗೀಕರಣಗೊಳಿಸುತ್ತದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಪ್ರತಿಭಟನಾನಿರತ ರೈತರು ಮತ್ತಷ್ಟು ಕೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT