ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫ್ತು ಹೆಚ್ಚಿಸಲು ನಾಳೆ ಸಭೆ

Published 14 ಜನವರಿ 2024, 14:32 IST
Last Updated 14 ಜನವರಿ 2024, 14:32 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದ ರಫ್ತು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೂಪಾಯಿ ಪಾವತಿ ಸವಾಲುಗಳು, ಜಾಗತಿಕ ರಫ್ತು ಅವಶ್ಯಕತೆ, ಕೆಂಪು ಸಮುದ್ರದ ಬಿಕ್ಕಟ್ಟಿನಿಂದ ವ್ಯಾಪಾರಿಗಳು ಎದುರಿಸುತ್ತಿರುವ ಸವಾಲುಗಳು ಮತ್ತು ರಷ್ಯಾ–ಉಕ್ರೇನ್‌ ಯುದ್ಧ ಹಾಗೂ ಇಸ್ರೇಲ್‌–ಹಮಾಸ್‌ ಸಂಘರ್ಷದಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಅನಿಶ್ಚಿತ ಸ್ಥಿತಿ ಕುರಿತು ಸಭೆಯಲ್ಲಿ ಚರ್ಚೆ ಮಾಡುವ ನಿರೀಕ್ಷೆ ಇದೆ. ಸಭೆಯಲ್ಲಿ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಮತ್ತು ಸಾರ್ವಜನಿಕ ಹಾಗೂ ಖಾಸಗಿ ವಲಯದ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT