ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ನಿಯಂತ್ರಿಸಲು 30 ಲಕ್ಷ ಟನ್‌ ಗೋಧಿಯನ್ನು ಮಾರುಕಟ್ಟೆಗೆ ಬಿಡಲಿದೆ ಕೇಂದ್ರ

Last Updated 11 ಫೆಬ್ರವರಿ 2023, 4:35 IST
ಅಕ್ಷರ ಗಾತ್ರ

ನವದೆಹಲಿ: ಹೆಚ್ಚುತ್ತಿರುವ ಗೋಧಿ ಮತ್ತು ಹಿಟ್ಟಿನ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರವು ‘ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್)’ ಅಡಿಯಲ್ಲಿ 30 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಮಾರುಕಟ್ಟೆಗೆ ಬಿಡಲಿದೆ.

ರಾಜ್ಯ ಸರ್ಕಾರಗಳಿಗೆ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಗ್ರಾಹಕ ಸಹಕಾರ ಒಕ್ಕೂಟ (ಎನ್‌ಸಿಸಿಎಫ್) , ಭಾರತೀಯ ಕೃಷಿ ಸಹಕಾರ ಮಾರುಕಟ್ಟೆ ಮಂಡಳಿ (ಎನ್‌ಎಎಫ್‌ಇಡಿ), ರಾಜ್ಯ ಸಹಕಾರಿ ಸಂಸ್ಥೆಗಳು, ಮಂಡಳಿಗಳಿಗೆ ಗೋಧಿಯನ್ನು ನೀಡಲು ನಿರ್ಧರಿಸಲಾಗಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದು, ದೇಶೀಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಹೆಚ್ಚುತ್ತಿರುವ ಆಹಾರ ಪದಾರ್ಥಗಳ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರವು ಕಾಲಕಾಲಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು.

ಬೆಲೆಗಳನ್ನು ನಿಯಂತ್ರಿಸಲು ದಾಸ್ತಾನು ಬಿಡುಗಡೆ ಮಾಡುವುದು, ಸಂಗ್ರಹಕ್ಕೆ ಮಿತಿ ಹೇರುವುದು, ಮಿತಿಮೀರಿದ ಸಂಗ್ರಹಣೆ ತಡೆಯಲು ಘೋಷಿತ ದಾಸ್ತಾನಿನ ಮೇಲ್ವಿಚಾರಣೆ ಮಾಡುವುದೂ ಸರ್ಕಾರದ ಕ್ರಮದ ಭಾಗವಾಗಿರಲಿದೆ. ಆಮದು ಸುಂಕದ ಸರಳೀಕರಣ, ಆಮದು ಕೋಟಾದಲ್ಲಿನ ಬದಲಾವಣೆ, ಸರಕುಗಳ ರಫ್ತಿನ ಮೇಲಿನ ನಿರ್ಬಂಧಗಳಂಥ ವ್ಯಾಪಾರ ನೀತಿಯ ಬದಲಾವಣೆಯನ್ನೂ ಸರ್ಕಾರ ಮಾಡಲಿದೆ ಎಂದು ಅವರು ತಿಳಿಸಿದರು.

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT